fbpx

ಕೊನೆಗೂ ವಿಧಾನಪರಿಷತ್ ಗೆ ಎಚ್.ವಿಶ್ವನಾಥ, ಸಿ.ಪಿ.ಯೋಗೇಶ್ವರ ನಾಮಕರಣ

ಬೆಂಗಳೂರು : ಸಿ.ಪಿ.ಯೋಗೇಶ್ವರ್, ವಿಶ್ವನಾಥ್, ಭಾರತಿ ಶೆಟ್ಟಿ, ಶಾಂತಾರಾಮ್ ಬುಡ್ನಾ ಸಿದ್ದಿ ಹಾಗೂ ಡಾ.ತಳವಾರ್ ಸಾಬಣ್ಣ ಅವರನ್ನು ವಿಧಾನಪರಿಷತ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ.

ರಾಜ್ಯದ ಸಮ್ಮಿಶ್ರ ಸರಕಾರದ ಪತನಕ್ಕೆ ಪ್ರಮುಖ ಕಾರಣಕರ್ತರು ಎನ್ನಲಾಗಿದ್ದ  ಸಿ.ಪಿ.ಯೋಗೇಶ್ವರ್ ಹಾಗೂ ಎಚ್.ವಿಶ್ವನಾಥ್ ಸೇರಿದಂತೆ ಐವರಿಗೆ ವಿಧಾನಪರಿಷತ್ತಿಗೆ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರ ಮಾಡಿದ್ದ ಶಿಫಾರಸ್ಸಿಗೆ ರಾಜ್ಯಪಾಲ ವಜುಭಾಯಿ ವಾಲಾ ಬುಧವಾರ ಅಂಕಿತ ಹಾಕಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್.ವಿಶ್ವನಾಥ್ ಪರಾಭವಗೊಂಡಿದ್ದವರು ಈಗ ವಿಧಾನಪರಿಷತ್ ಪ್ರವೇಶಿಸಿದ್ದಾರೆ.

 

Please follow and like us:
error
error: Content is protected !!