ಕೊಪ್ಪಳದ ಕಿಮ್ಸ್ನಲ್ಲಿ ಕೋವಿಡ್ ಆರ್‌ಟಿಪಿಸಿಆರ್ ಪ್ರಯೋಗಾಲಯ ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ


ಕೊಪ್ಪಳ, ಜೂ. : ಕೊಪ್ಪಳದ ಕಿಮ್ಸ್ನಲ್ಲಿ ಕೋವಿಡ್-19 ಸ್ಕಿನಿಂಗ್ ಪರೀಕ್ಷೆ ಹಾಗೂ  ಆರ್‌ಟಿಪಿಸಿಆರ್ ಪ್ರಯೋಗಾಲಯದಿಂದ ಕೋವಿಡ್ ನೆಗೆಟಿವ್ ಮತ್ತು ಇತರೆ ಲಕ್ಷಣಗಳನ್ನು ತಿಳಿದುಕೊಳ್ಳಲು ಅನುಕೂಲವಾಗಲಿದೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಹೇಳಿದರು.
ಅವರು ಶುಕ್ರವಾರ ಕೊಪ್ಪಳದ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್) ನಲ್ಲಿ ವೈರಾಣು ಸಂಶೋಧನೆ ಮತ್ತು ರೋಗ ನಿರ್ಣಯ ಪ್ರಯೋಗಾಲಯದ ಉದ್ಘಾಟನೆ ನಂತರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ಪ್ರಯೋಗಾಲಯಕ್ಕೆ ಎಸ್.ಡಿ.ಆರ್.ಎಫ್ ನಿಧಿಯಲ್ಲಿ ಸಿವಿಲ್ ಕಾಮಗಾರಿಗೆ ರೂ. 23.70 ಲಕ್ಷ ಹಣ ಖರ್ಚು ಮಾಡಲಾಗುತ್ತಿದ್ದು, ಪ್ರಯೋಗಾಲಯದ ಉಪಕರಣಗಳ ಖರೀದಿ ಮೊತ್ತ ರೂ. 111.93 ಲಕ್ಷ ಆಗಲಿದೆ. ಟ್ರೂನಾಟ್ ಉಪಕರಣದಲ್ಲಿ ಪ್ರತಿ ಶಿಫ್ಟ್ಗೆ 20 ರಿಂದ 25 ಜನ ಹಾಗೂ ಪ್ರತಿ ದಿನ 40 ರಿಂದ 50 ಪರೀಕ್ಷೆಗಳನ್ನು ಮಾಡಲಾಗುತ್ತದೆ. ಆರ್‌ಟಿಪಿಸಿಆರ್ ಉಪಕರಣದಲ್ಲಿ ಪ್ರತಿ ಶಿಫ್ಟ್ಗೆ 70 ರಿಂದ 75 ಜನರು ಹಾಗೂ ಪ್ರತಿದಿನ 140-145 ಪರೀಕ್ಷೆಗಳನ್ನು ಮಾಡಲಾಗುವುದು. ಸ್ಕಿçÃನಿಂಗ್ ಪರೀಕ್ಷೆ(ಟ್ರೂನಾಟ್), ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಸಂಶೋಧನಾ ವಿಜ್ಞಾನಿಗಳು, ಸಂಶೋಧನಾ ಸಹಾಯಕರು, ಪ್ರಯೋಗಶಾಲಾ ತಜ್ಞರು ಮಾಡುತ್ತಾರೆ ಎಂದು ಸಚಿವರು ತಿಳಿಸಿದರು.
ಆರಂಭದಲ್ಲಿ ಪ್ರಾಯೋಗಿಕವಾಗಿ 55 ಪರೀಕ್ಷೆಗಳನ್ನು ಮಾಡಿದ್ದು, ಎಲ್ಲಾ 55 ಪರೀಕ್ಷೆಗಳು ನೆಗೆಟಿವ್ ಬಂದಿವೆ. ಕೊರೊನಾ ಸೋಂಕು ಹೆಚ್ಚಾಗುತ್ತಿದ್ದರೂ ಯಾರೂ ಗಾಬರಿ ಪಡಬೇಕಾಗಿಲ್ಲ. ಏಕೆಂದರೆ ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಮತ್ತು ವಯಸ್ಸಾದವರು ಮರಣ ಹೊಂದುತ್ತಿದ್ದರೂ, ಮರಣ ಪ್ರಮಾಣ ಬಹಳ ಕಡಿಮೆ ಇದೆ. ಕೆಲವೊಬ್ಬರಿಗೆ ಯಾವುದೇ ಕೊರೊನಾ ಲಕ್ಷಣಗಳು ಕಂಡುಬರದಿದ್ದರೂ ಅವರಿಗೆ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿರುವುದು ಕಂಡುಬAದಿದ್ದು, ಇದು ಬಹುತೇಕ ಮಹಾರಾಷ್ಟçದಿಂದ ಬಂದವರಿAದಲೇ ಕಂಡುಬAದಿದೆ ಎಂದು ಮಾಹಿತಿ ನೀಡಿದರು.
ಕೊರೊನಾ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ಕೇಂದ್ರ ಸರ್ಕಾರವು ರೂ. 20 ಲಕ್ಷ ಕೋಟಿ ಆರ್ಥೀಕ ಪ್ಯಾಕೆಜ್ ಅನ್ನು ಘೋಷಣೆ ಮಾಡಿದೆ. ರಾಜ್ಯ ಸರ್ಕಾರದಿಂದಲೂ ಕೂಡ ಸಂಕಷ್ಟದಲ್ಲಿರುವ ವರ್ಗಗಳಿಗೆ ಪರಿಹಾರವನ್ನು ನೀಡಿದ್ದು, ಮೆಕ್ಕೆಜೋಳಕ್ಕಾಗಿ ರೂ. 500 ಕೋಟಿ ಅನುದಾನವನ್ನು ರೈತರಿಗಾಗಿ ರಾಜ್ಯ ಸರ್ಕಾರ ಘೊಷಿಸಿದೆ. ರೈತರು ತಮ್ಮ ಬ್ಯಾಂಕ್ ಖಾತೆಗೆ ಚಾಲ್ತಿಯಲ್ಲಿರುವ ಆಧಾರ್ ಕಾರ್ಡ್ ಜೋಡಣೆ ಮಾಡಬೇಕು. ಕೆಲವೊಂದು ರೈತರು ಖಾತೆಯ ಸರಿಯಾದ ಮಾಹಿತಿ ನೀಡದ ಕಾರಣದಿಂದ ರೈತರ ಖಾತೆಗೆ ಹಾಕಿದ ಹಣ ಬೇರೆ ಬೇರೆ ಖಾತೆಗೆ ಸಂದಾಯವಾಗಿರುವ ದೂರುಗಳು ಕೇಳಿಬಂದಿವೆ ಎಂದು ಸಚಿವರು ತಿಳಿಸಿದರು.
ಕೃಷಿ ಇಲಾಖೆಯಲ್ಲಿ ಅನುವುಗಾರರಿಗೆ ಕೆಲಸದಿಂದ ಯಾವುದೇ ಕಾರಣಕ್ಕೂ ಅವರನ್ನು ತೆಗೆಯುವುದಿಲ್ಲ.  ಹೀಗಾಗಿ ಅವರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. 2015-16 ನೇ ಸಾಲಿನ ವಿಮೆಗಾಗಿ ಅಧಿಕಾರಿಗಳ ಸಭೆ ಕರೆದು ಇದರ ಸೆಟಲ್‌ಮೆಂಟ್‌ಗಾಗಿ ಅವರಿಗೆ ಈಗಾಗಲೇ ಸೂಚನೆ ನಿಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಎಚ್. ವಿಶ್ವನಾಥ ರೆಡ್ಡಿ, ಸಂಸದರಾದ ಸಂಗಣ್ಣ ಕರಡಿ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ, ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ. ಸಂಗೀತಾ, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಶೇಖ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಿಂಗರಾಜ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಎಸ್.ಬಿ.ದಾನರೆಡ್ಡಿ, ಕಿಮ್ಸ್ ನಿರ್ದೇಶಕ ಡಾ. ವಿಜಯನಾಥ ಇಟಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವೀಕ್ಷಣೆ: ಕೊಪ್ಪಳ ತಾಲ್ಲೂಕಿನ ಬಂಡಿಹರ್ಲಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಸಚಿವರು ವೀಕ್ಷಿಸಿದರು.
ಚೆಕ್ ವಿತರಣೆ: ಕೊಪ್ಪಳ ತಾಲ್ಲೂಕಿನ ಹೊಸನಿಂಗಾಪುರ ಗ್ರಾಮದ ಬ್ರೆöÊನ್ ಟ್ಯೂಮರ್‌ನ ಕಾರಣ ಶಸ್ತçಚಿಕಿತ್ಸೆಗೆ ಒಳಪಟ್ಟ ಮಹಿಳೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 40,000 ಗಳ ಚೆಕ್‌ನ್ನು ಸಚಿವರು ವಿತರಿಸಿದರು.

Please follow and like us:
error