ಗ್ರಾಹಕರು ಪ್ರದರ್ಶನ ಮೇಳದ ಸದುಪಯೋಗ ಪಡೆದುಕೊಳ್ಳಿ : ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳದ ತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣುಗಳ ಮೇಳ

ಕೊಪ್ಪಳ : ಕೊಪ್ಪಳ ತೋಟಗಾರಿಕೆ ಇಲಾಖೆ ನಿರ್ದೇಶಕ ಕೃಷ್ಣ  ಉಕ್ಕುಂದರು ಮತ್ತೊಂದು ಮೇಳವನ್ನು ತಮ್ಮ  ಇಲಾಖೆಯಿಂದ ಹಮ್ಮಿಕೊಂಡಿದ್ದಾರೆ.  ಶಿವರಾತ್ರಿ ಅಂಗವಾಗಿ ಹಾಗೂ ರೈತರಿಗೆ ನೇರವಾಗಿ ಮಾರುಕಟ್ಟೆ ಕಲ್ಪಿಸಿಕೊಡಲು  ಕೊಪ್ಪಳ ತೋಟಗಾರಿಕೆ ಇಲಾಖೆ, ಕರ್ನಾಟಕ ರಾಜ್ಯ ತೋಟಗಾರಿಕೆ ಮಾರಾಟ ಮಹಾ ಮಂಡಳಿ(ನಿ.) ಬೆಂಗಳೂರು ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ವಿವಿಧ ಹಣ್ಣುಗಳ ಮೇಳೆವನ್ನು ಹಮ್ಮಿಕೊಳ್ಳಲಾಗಿದ್ದು, ಮೇಳವನ್ನು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಉದ್ಘಾಟಿಸಿದರು.

ಕೊಪ್ಪಳದ ತೋಟಗಾರಿಕೆ ಆವರಣದಲ್ಲಿ  ರೈತರಿಂದ ನೇರವಾಗಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಹಣ್ಣುಗಳು ಸಿಗುವಂತೆ ಮೇಳವನ್ನು ಆಯೋಜಿಸಲಾಗಿದೆ.

ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಮೋಸಂಬಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಮತ್ತು ಜೇನು ಪ್ರದರ್ಶನ ಜೊತೆಗೆ ಮಾರಾಟ ಮಾಡಲಾಗುತ್ತಿದೆ. ಕುಷ್ಟಗಿ, ಯಲಬುರ್ಗಾ, ಗಂಗಾವತಿ, ಕಾರಟಗಿ, ಕನಕಗಿರಿ, ಕುಕನೂರು ಸೇರಿದಂತೆ ಕೊಪ್ಪಳದ ವಿವಿಧ ಗ್ರಾಮದ ಹಣ್ಣು ಬೆಳೆಗಾರರು ಸ್ಟಾಲ್ ಗಳನ್ನು ಹಾಕಿದ್ದು ಸಾವಯವ ಗೊಬ್ಬರದಲ್ಲಿ ಬೆಳೆದ ಹಣ್ಣುಗಳನ್ನು ತಂದು ಮೇಳದಲ್ಲಿ ಮಾರಾಟ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮೇಳವನ್ನು ಉದ್ಘಾಟಿಸಿ ವೀಕ್ಷಣೆ ಮಾಡಿ ರೈತರ ಜೊತೆ ಚರ್ಚೆ ನಡೆಸಿದರು. ತೋಟಗಾರಿಕೆ ನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರಿಗೆ ಕೇವಲ ಹಣ್ಣುಗಳನ್ನು ಬೆಳೆಯುವುದಷ್ಟೆ ಅಲ್ಲ ಇದಕ್ಕೆ ಹೊಸ ಉದ್ಯಮ ಟಚ್ ನೀಡಬೇಕು ಜೊತೆಗೆ ತಂಪುಪಾನಿಯ, ಚಾಕಲೇಟ್, ತಿನಿಸು, ಔಷಧಿಗಳನ್ನು ತಯಾರಿಸುವ ಯುನಿಟ್ ಗಳನ್ನು ಹಾಕಿ ಉತ್ಪನ್ನಗಳಿಗೂ ಮಾರುಕಟ್ಟೆ ಕಲ್ಪಿಸುವಂತ ಕೆಲಸವಾಗಬೇಕು. ಯಾರು ಮುಂದೆ ಬರ್ತಾರೆ ಅವರಿಗೆ ಸಲಹೆ ನೀಡಬೇಕೆಂದು ಮಾಹಿತಿ ನೀಡಿದರು. ಒಟ್ಟಾರೆ ಕೊಪ್ಪಳದಲ್ಲಿ ತೋಟಗಾರಿಕೆ ಇಲಾಖೆ ರೈತರಿಗೆ ಅನುಕೂಲವಾಗುವಂತ ಮೇಳಗಳನ್ನು ಆಯೋಜಿಸಿ ಗ್ರಾಹಕರಿಗೆ ಮತ್ತು ರೈತರಿಗೆ ಅನುಕೂಲಮಾಡುತ್ತಿದೆ.

 

ಗ್ರಾಹಕರಿಗೆ ಅನುಕೂಲವಾಗುವ ಹಿತದೃಷಿಯಿಂದ ವಿವಿಧ ರೀತಿಯ ಹಣ್ಣು ಮತ್ತು ಜೇನನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ಯೋಗ್ಯ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿ ಸದುಪಯೋಗ ಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಸೋಮವಾರ (ಮಾ.08)ದಂದು ಕೊಪ್ಪಳ ನಗರದ ತೋಟಗಾರಿಕೆ ಉಪನಿರ್ದೇಕರ ಕಚೇರಿ ಆವರಣದಲ್ಲಿ ಕೊಪ್ಪಳ ತೋಟಗಾರಿಕೆ ಇಲಾಖೆ(ಜಿ.ಪಂ.), ಕರ್ನಾಟಕ ರಾಜ್ಯ ತೋಟಗಾರಿಕೆ ಮಾರಾಟ ಮಹಾ ಮಂಡಳಿ(ನಿ.) ಬೆಂಗಳೂರು ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ (ರೈತರಿಂದ ನೇರವಾಗಿ ಗ್ರಾಹಕರಿಗೆ) ಮಾರ್ಚ್ 08 ರಿಂದ 11 ರವರೆಗೆ ನಡೆಯಲಿರುವ ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಮೋಸಂಬಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ-2021 ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯ ರೈತರಿಗೆ, ಮಾರಾಟಗಾರರಿಗೆ, ಗ್ರಾಹಕರಿಗೆ ಅನುಕೂಲವಾಗುವ ಸಲುವಾಗಿ ಈ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲೆಯ ರೈತರು ಹೊಸತನಕ್ಕೆ ಹೆಚ್ಚಿನ ರೀತಿಯ ಒತ್ತು ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಒಂದು ಜಿಲ್ಲೆ ಒಂದು ಬೆಳೆಗೆ ಜಿಲ್ಲೆಯಿಂದ ಪೇರಲ ಬೆಳೆ ಆಯ್ಕೆಯಾಗಿದ್ದು, ಜಿಲ್ಲೆಯ ರೈತರು ಸಂಘಟಿತರಾಗಿ ಪೇರಲ ಬೆಳೆಯನ್ನು ಹೆಚ್ಚಿನ ಮಟ್ಟದಲ್ಲಿ ಬೆಳೆದು ಇಡೀ ದೇಶಕ್ಕೆ ಕೊಪ್ಪಳ ಪೇರಲ ಬೆಳೆಯನ್ನು ಮಾದರಿಯಾಗಿ ತೋರಿಸಿ. ಕೃಷಿ ಇಲಾಖೆಯ ಫಲಾನುಭವಿಗಳು ಸರ್ಕಾರದ ವಿವಿಧ ಯೋಜನೆಗಳನ್ನು ಸದುಪಯೋಗ ಪಡೆದುಕೊಂಡು ಮತ್ತಷ್ಟು ಪ್ರಗತಿ ಸಾಧಿಸಿ ಎಂದು ರೈತರಿಗೆ ಸಲಹೆ ನೀಡಿದರು.
ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಸಿ.ಉಕ್ಕುಂದ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಮಹಾ ಶಿವರಾತ್ರಿ ಪ್ರಯುಕ್ತ ಕೊಪ್ಪಳ ಜಿಲ್ಲೆಯ ರೈತರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಹಾಗೂ ರೈತರಿಂದ ಗ್ರಾಹಕರಿಗೆ ನೇರವಾಗಿ ಅನುಕೂಲ ಕಲ್ಪಿಸುವ ಸಲುವಾಗಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಇಂದಿನಿAದ ಮಾರ್ಚ್ 11 ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿರುವ ಮೇಳದಲ್ಲಿ ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಮೋಸಂಬಿ ಸೇರಿದಂತೆ ಹತ್ತು-ಹಲವು ತರಹದ ಹಣ್ಣುಗಳನ್ನು ಹಾಗೂ ಜೇನು ಪ್ರದರ್ಶನ ಮತ್ತು ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಗ್ರಾಹಕರಿಗೆ ಯೋಗ್ಯ ಬೆಲೆಗಳಲ್ಲಿ ಲಭ್ಯವಿದ್ದು, ಜಿಲ್ಲೆಯ ಗ್ರಾಹಕರು ತೋಟಗಾರಿಕೆ ಇಲಾಖೆಯ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿ ಕಡಿಮೆ ಬೆಲೆಯಲ್ಲಿ ಹಣ್ಣುಗಳನ್ನು ಪಡೆದುಕೊಳ್ಳಿ ಎಂದರು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತಿ ಕೃಷಿ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅಮರೇಶ ಗೋನಾಳ ಹಾಗೂ ರೈತ ಮುಖಂಡರು ಪ್ರದರ್ಶನ ಮಳಿಗೆಗಳಿಗೆ ಭೇಟಿ ನೀಡಿ, ವೀಕ್ಷಿಸಿ ಹಣ್ಣಿನ ರುಚಿಯನ್ನು ಸವಿದರು. ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಸಿ.ಉಕ್ಕುಂದ ಅವರು ಜಿಲ್ಲೆಯ ರೈತರು ಬೆಳೆದಿರುವ ವಿವಿಧ ರೀತಿಯ ಹಣ್ಣುಗಳ ಬಗ್ಗೆ ಹಾಗೂ ಜೇನಿನ ಕುರಿತು ಮಾಹಿತಿ ನೀಡಿದರು. ಮೇಳದಲ್ಲಿ ಕಲ್ಲಂಗಡಿ, ಜೇನು, ಒಂದು ಜಿಲ್ಲೆ ಒಂದು ಬೆಳೆ-ಪೇರಲ ಮಳಿಗೆಗಳು ಹೆಚ್ಚು ಆಕರ್ಷಕವಾಗಿ ಕಂಡುಬAದವು.
ಈ ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷರಾದ ಯಂಕಣ್ಣ ಯರಾಶಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಣ್ಣ ಮೂಲಿಮನಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

Please follow and like us:
error