ಕೊಪ್ಪಳ ಜಿಲ್ಲೆಯಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ : ಸ್ವಯಂಪ್ರೇರಿತವಾಗಿ ಬಂದ್ ಗೆ ಬೆಂಬಲಿಸಿದ ಜನತೆ

ಕನ್ನಡನೆಟ್ ಕೊಪ್ಪಳ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಹೊರಟಿರುವ ಕೃಷಿ ಮಸೂದೆಗಳ ವಿರುದ್ಧ ರಾಜ್ಯಾದ್ಯಂತ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ ಆರಂಭಿಸಿದ್ದಾರೆ. ಇಂದು ಮುಂಜಾನೆ 7 ಗಂಟೆಯಿಂದಲೇ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತರ ಹೋರಾಟಕ್ಕೆ ಕಾರ್ಮಿಕ, ಪ್ರಗತಿಪರ, ಕನ್ನಡಪರ, ಯುವ, ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಧುಮುಕಿವೆ. ಕೊಪ್ಪಳ ಜಿಲ್ಲೆಯಾದ್ಯಂತ ಬಂದ್ ಗೆ ಉತ್ತಮ  ಪ್ರತಿಕ್ರಿಯೆ ವ್ಯಕ್ತವಾಗಿದ್ದು ಅಂಗಡಿ ವ್ಯಾಪಾರ ಮಳಿಗೆಗಳು ಬಂದ್ ಆಗಿದ್ದವು. ಬಸ್ ಸ್ಟಾಂಡ್ ಎದುರಿಗೆ ರೈತಪರ ಸಂಘಟನೆಯವರು ಟೈರ ಗೆ ಬೆಂಕಿ ಹಚ್ಚಿ ಆಕ್ರೊಶ ವ್ಯಕ್ತಪಡಿಸಿದರು. ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಕುಷ್ಟಗಿ ಸರ್ಕಲ್ ನಲ್ಲಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಿದರು.

ಗಂಗಾವತಿಯಲ್ಲಿ ರೈತ ಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ನಡೆಸಿದರು. ಹನುಮಸಾಗರ, ಕುಷ್ಟಗಿ, ಕಾರಟಗಿ, ಯಲಬುರ್ಗಾದಲ್ಲಿಯೂ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರೈತರು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು

ವಾಹನ ಸಂಚಾರ ಎಂದಿನಂತೆ ಇತ್ತು. ಬಸ್ ಸ್ಟಾಂಡ್ ನಿಂದ ಬಸ್ ಗಳು ಹೊರಬರದೇ ಇದ್ದಿದ್ದರಿಂದ ಪ್ರಯಾಣಿಕರು ಪರದಾಡಿದರು.

ರೈತ ಮುಖಂಡ ನಜೀರಸಾಬ ಮೂಲಿಮನಿ., ಕಾರ್ಮಿಕ ಸಂಘಟನೆಯ ಡಿ.ಎಚ್.ಪೂಜಾರ್, ಅಲ್ಲಮಪ್ರಭು ಬೆಟ್ಟದೂರು, ವಿಠ್ಠಪ್ಪ ಗೋರಂಟ್ಲಿ,  ಕಾಸಿಂ ಸರ್ಧಾರ ವಿವಿಧ ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಯ ಕಾರ್ಯಕರ್ತರು, ನಾಯಕರ ಕೊಪ್ಪಳ ರೈತಪರ ಬೆಂಬಲ ಬಂದ್ ವಿವಿಧ ಸಂಘಟನೆಗಳ ಜೊತೆ ಸೇರಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾ ಅಧ್ಯಕ್ಷರು ಆದಿಲ್ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅಲೀಮುದ್ದೀನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಬ್ದುಲ್ ವಾಹಿದ್  ನೇತೃತ್ವದಲ್ಲಿ  ಮೆರವಣಿಗೆ ನಡೆಸಲಾಯಿತು.  ಬಸ್ ಸ್ಟಾಂಡ್ ನಿಂದ ಹೊರ ಮೆರವಣಿಗೆ ಅಶೋಕ ಸರ್ಕಲ್ ಮೂಲಕ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ಕುಷ್ಟಗಿ ಸರ್ಕಲ್ ತಲುಪಿತು.

Please follow and like us:
error