ಕೊರೊನಾ ಕಾರಣ ಸಂಸತ್ತಿನ ’ಚಳಿಗಾಲದ ಅಧಿವೇಶನ’ ರದ್ದುಪಡಿಸಿದ ಕೇಂದ್ರ ಸರ್ಕಾರ

ಕೊರೊನಾ ಕಾರಣಕ್ಕೆ ಈ ಬಾರಿಯ ಸಂಸತ್ತಿನ ಚಳಿಗಾಳದ ಅಧಿವೇಶನ ನಡೆಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇದಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಕೂಡಾ ಒಲವು ತೋರಿದೆ ಎಂದು ಅವರು ಹೇಳಿದ್ದಾರೆ.

 

ಕೇಂದ್ರ ಸರ್ಕಾರವು ರೈತ ವಿರೋಧಿ ಕಾನೂನುಗಳನ್ನು ತಂದಿದೆ ಎಂದು ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ಮುಂದುವರೆಸಿರುವ ಹಿನ್ನಲೆಯಲ್ಲಿ, ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಚರ್ಚಿಸಲು ಅಧಿವೇಶನ ನಡೆಸಬೇಕು ಎಂದು ಕಾಂಗ್ರೆಸ್ ನಾಯಕ ಅಧೀರ್‌ ರಂಜನ್ ಚೌಧರಿ ಬೇಡಿಕೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯಸಿರುವ ಪ್ರಲ್ಹಾದ್ ಜೋಶಿ ಅಧಿವೇಶನ ಇಲ್ಲ ಎಂದು ದೃಡಪಡಿಸಿದ್ದಾರೆ.

Please follow and like us:
error