fbpx

ಕೊರೊನಾ ನಿಯಂತ್ರಣದಲ್ಲಿ ಬಿಜೆಪಿ ಸರಕಾರ ವಿಫಲ, ಹಗರಣ ಆಗಿರುವುದು ಬಹುತೇಕ ಸ್ಪಷ್ಟ : ಯು.ಟಿ.ಖಾದರ್

 

ಕೊಪ್ಪಳ :   ರಾಜ್ಯದಲ್ಲಿರುವ ಬಿಜೆಪಿ ಸರಕಾರ ಕೊರೊನಾ ನಿಯಂತ್ರಣದಲ್ಲಿ ವಿಫಲ ಸಂಶಯಾಸ್ಪದ ನಡೆಯಿಂದ ಹಗರಣ ಆಗಿರುವುದು ಬಹುತೇಕ ಸ್ಪಷ್ಟ . ಅವರು  ವಿರೋಧ ಪಕ್ಷ ಜವಾಬ್ದಾರಿಯುತವಾಗಿ ಮಾಡಿರುವ ಆರೋಪಗಳ ಬಗ್ಗೆ ಯಾವುದೇ ತನಿಖೆ ಇಲ್ಲ ನಾಲ್ಕೈದು ಮಂತ್ರಿಗಳು ಡೈಲಾಗ್ ಹೊಡೆದದ್ದೇ ಸಾಧನೆ ಸ್ವಚ್ಛ, ಪಾರದರ್ಶಕ ಸರಕಾರ ನಡೆಸಬೇಕಾದರೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಜನರಿಗೆ ಕೊರೊನಾ ನಿಯಂತ್ರಣ, ನಿರ್ವಹಣೆಯ ಲೆಕ್ಕಾಚಾರ ಜನರಿಗೆ ತಿಳಿಸಲಿ  ಎಂದು  ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ .

ಕೊಪ್ಪಳದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ವಾಲಿಟಿ ಇಲ್ಲದ ಪಿಪಿಇ ಕಿಟ್, ಮಾಸ್ಕ್‌ಗಳನ್ನು ಡಾಕ್ಟರ್, ವೈದ್ಯಕೀಯ ಸಿಬ್ಬಂದಿಗೆ  ನೀಡಿದೆ ಸರಕಾರ.ಲಾಕ್‌ಡೌನ್ ವೇಳೆ ಸರಕಾರಕ್ಕೆ ಪ್ರತಿಪಕ್ಷದವರು ಸಹಕಾರ ನೀಡಿದ್ದೇವೆ.ರಾಜ್ಯದ ಜನರು ಬದುಕಬೇಕೆಂದರೆ ದೇವರೇ ಕಾಪಾಡಬೇಕು ಅಂತ ಆರೋಗ್ಯ ಮಂತ್ರಿಗಳೇ ಕೈ ಚೆಲ್ಲುತ್ತಾರೆಮಾಡಿರುವ ಹಗರಣವನ್ನು ಸರಕಾರ ಒಪ್ಪಲೇಬೇಕು. ತನಿಖೆಗೂ ಸರಕಾರ ಒಪ್ಪಬೇಕು. ಕಾಂಗ್ರೆಸ್ ಸರಕಾರ ಇದ್ದಾಗ ಆರೋಪ ಬಂದಾಗ ಪ್ರತಿಪಕ್ಷದ ಬೇಡಿಕೆಗೆ ಸ್ಪಂದಿಸುತ್ತಿತ್ತು.ಈ ಸರಕಾರ ಆರೋಪಗಳನ್ನು ಸಹಿಸುತ್ತಿಲ್ಲ, ಸಹಕಾರವನ್ನು ನೀಡುತ್ತಿಲ್ಲ ಸರಿಯಾದ ಆಡಳಿತ ನಡೆಸಲು ಪ್ರತಿಪಕ್ಷದವರು ನೀಡುತ್ತಿರುವ ಇಂಜೆಕ್ಷನ್ ಇದು. ಅಂದಾಗ ಆರೋಗ್ಯಯುತ ಸರಕಾರ ಇರುತ್ತದೆ ಕಾಯಿಲೆ‌ ಹೆಚ್ಚುತ್ತಿರುವುದಕ್ಕೆ, ಸಾವು ಹೆಚ್ಚುತ್ತಿರುವುದಕ್ಕೆ, ಅಮಾನವೀಯ ಶವಸಂಸ್ಕಾರಕ್ಕೆ ಸರಕಾರದ ನಿರ್ವಹಣೆ ಕೊರತೆ ಕಾರಣ ಮಂತ್ರಿಗಳ ನಡುವೆ ಇರುವ ಆಂತರಿಕ ರಾಜಕೀಯ ಗೊಂದಲದಿಂದ ಜನರು‌ ಯಾಕೆ ಶಿಕ್ಷೆ ಅನುಭವಿಸಬೇಕು. ಕಳೆದ ಮೂರು ತಿಂಗಳಲ್ಲಿ ಕೊರೋನಾಗೆ ಸಂಬಂಧಿಸಿದಂತೆ ಎಷ್ಟು ಆದೇಶಗಳನ್ನು ಸರಕಾರ ಹೊರಡಿಸಿದೆ ಎಂಬುದನ್ನು ಸ್ಪಷ್ಟಪಡಿಸಲಿ ಇದು ಮಾನವಿಯತೆ, ಕರುಣೆ ಇಲ್ಲದ ಸರಕಾರ ಕಾಂಗ್ರೆಸ್ ಪಕ್ಷ ರಾಜ್ಯ ಸರಕಾರದ ಈ ಧೋರಣೆಯನ್ನು ಖಂಡಿಸುತ್ತದೆ ಜನರ ಕಷ್ಟ ಅರಿಯಲು ಪ್ರತಿ ಜಿಲ್ಲೆಯಲ್ಲೂ ಕೆಎಎಸ್ ಅಧಿಕಾರಿಗಳ ಸಮೇತ ಸಮಿತಿ‌ ಮಾಡಲಿ. ಐಎಎಸ್ ಅಧಿಕಾರಿ ಕಮಿಟಿಯ ನೇತೃತ್ವ ವಹಿಸಲಿ ,ವೆಂಟಿಲೇಟರ್ ಸಂಜೀವಿನಿ ಅಲ್ಲ. ಸಾವು-ಬದುಕು ದೇವರ ಕೈಯಲ್ಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವೆ ಉಮಾಶ್ರಿ, ಡಿಸಿಸಿ ಅಧ್ಯಕ್ಷ ಶಿವರಾಜ್ ತಂಗಡಗಿ, ಮಾಜಿ ಶಾಸಕ ಹಸನಸಾಬ್ ದೋಟಿಹಾಳ,ಅಸೀಪ್ ಅಲಿ, ರಾಜಶೇಖರ ಹಿಟ್ನಾಳ, ಕಾಟನ್ ಪಾಷಾ , ಕೃಷ್ಣ ಇಟ್ಟಂಗಿ ಸೇರಿದಂತೆ ಇತರರು ಉಪಸ್ತಿತರಿದ್ದರು.

Please follow and like us:
error
error: Content is protected !!