ಕೊರೊನಾ ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ವಿಫಲ ಸರಕಾರದ ವಿರುದ್ದ ಕಾಂಗ್ರೆಸ್ ಧರಣಿ

ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ದ ಕಾಂಗ್ರೆಸ್ ಪಕ್ಷದ ನಾಯಕರು ಧರಣಿ ನಡೆಸಿದರು. ಕೊರೊನಾ ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ವಿಫಲವಾಗಿರುವ, ಬೆಡ್, ಆಕ್ಸಿಜನ್, ವೆಂಟಿಲೇಟರ್ ಒದಗಿಸುವಲ್ಲಿ ನಿರ್ಲಕ್ಷವಹಿಸಿದೆ ಎಂದು , ಬಡವರಿಗಾಗಿ ವಿಶೇಷ್ ಪ್ಯಾಕೇಜ್ ಘೋಷಿಸದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ರಮೇಶ್ ಕುಮಾರ್, ಕೃಷ್ಣಬೈರೇಗೌಡ, ಮಾಜಿ ಸಂಸದ ಉಗ್ರಪ್ಪ, ಬಿ.ಕೆ. ಹರಿಪ್ರಸಾದ್ ಮತ್ತಿತರರು ಧರಣಿಯದಲ್ಲಿ ಪಾಲ್ಗೊಂಡಿದ್ದರು.

Please follow and like us:
error