ಕೊರೋನ ವಿರುದ್ಧ ಹೋರಾಟ: 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಕೊರೋನ ವಿರುದ್ಧದ ಹೋರಾಟದಲ್ಲಿ ಭಾರತೀಯರು ಒಂದಾಗಿದ್ದು, ಆರ್ಥಿಕ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಸರಕಾರ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ಘೋಷಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶವನ್ನುದ್ದೇಶಿಸಿ ಇಂದು 8 ಗಂಟೆಗೆ ಮಾತನಾಡಿದ ಅವರು, ಆರ್ಥಿಕತೆ ಇಡೀ ದೇಶಕ್ಕೆ ಮುಖ್ಯವಾದದ್ದು. ಹೀಗಾಗಿ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದ್ದು, ಭಾರತದ ಅಭಿವೃದ್ಧಿಗೆ ಹೊಸ ವೇಗವನ್ನು ಒದಗಿಸಲಿದೆ. ನಾಳೆಯಿಂದ ಕೇಂದ್ರ ಹಣಕಾಸು ಸಚಿವರು ಇದರ ಬಗ್ಗೆ ವಿವರವಾಗಿ ಮಾಹಿತಿ ನೀಡಲಿದ್ದಾರೆ ಎಂದರು.

Please follow and like us:
error