ಕೊರೋನ ಸೋಂಕಿಗೆ ಪೊಲೀಸ್ ಬಲಿ

Bangalure: ಕೊರೋನ ಸೋಂಕಿಗೊಳಗಾಗಿ ಇಲ್ಲಿನ ವಿ.ವಿ. ಪುರಂ ವಾರ್ಡ್‌ನ ಸಂಚಾರ ಪೊಲೀಸ್ ಠಾಣೆಯ ಎಎಸ್ಸೈ ಮೃತಪಟ್ಟಿದ್ದಾರೆ 59 ವರ್ಷದ ಎಎಸ್ಸೈ ಕೊರೋನ ಸೋಂಕಿಗೆ ಬಲಿಯಾದ ರಾಜ್ಯದ ಮೊದಲ ಪೊಲೀಸ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇಲ್ಲಿನ ಸುಂಕದಕಟ್ಟೆಯಲ್ಲಿ ವಾಸಿಸುತ್ತಿದ್ದ ಎಎಸ್ಸೈ ಜೂ.13ರಂದು ಮನೆಯಲ್ಲೇ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ನಗರದ ಕೆ.ಸಿ. ಜನರಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದರು. ಬಳಿಕ ಅವರ ಗಂಟಲಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿತ್ತೆನ್ನಲಾಗಿದೆ

. ಎಎಸ್ಸೈ ಸೇವೆಯಿಂದ ನಿವೃತ್ತಿಯಾಗಲು 15 ದಿನವಷ್ಟೇ ಬಾಕಿ ಇತ್ತು. ಎಪ್ರಿಲ್, ಮೇ ತಿಂಗಳಲ್ಲಿ ರಜೆಯಲ್ಲಿದ್ದ ಅವರು, ಜೂ.1ರಿಂದ ಕರ್ತವ್ಯಕ್ಕೆ ಹಾಜರಾಗಿದ್ದರು ಎಂದು ತಿಳಿದುಬಂದಿದೆ. ಅವರಿಗೆ ಸೋಂಕು ತಗುಲಿದ್ದು ಹೇಗೆ ಎಂಬುದು ೊತ್ತಾಗಿಲ್ಲ. ಅವರ ಸಂಪರ್ಕದಲ್ಲಿದ್ದ ಮನೆಯ 13 ಮಂದಿಯನ್ನು ಪ್ರಾಥಮಿಕ ಸಂಪರ್ಕಿತರೆಂದು ಹೋಟೆಲ್‌ನಲ್ಲಿ ಪ್ರತ್ಯೇಕವಾಗಿಡಲಾಗಿದ್ದು, ಏಳು ಮಂದಿ ದ್ವಿತೀಯ ಸಂಪರ್ಕಿತರಿದ್ದಾರೆ. ಈ ನಡುವೆ ವಿ.ವಿ. ಪುರಂ ಸಂಚಾರ ಪೊಲೀಸ್ ಠಾಣೆಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ, ಸೀಲ್ ಡೌನ್ ಮಾಡಲಾಗಿದೆ ಎಂದು ಬಿಬಿಎಂಪಿ ದಕ್ಷಿಣ ವಿಭಾಗದ ಆರೋಗ್ಯಾಧಿಕಾರಿ ಡಾ. ಶಿವಕುಮಾರ್ ಮಾಹಿತಿ ನೀಡಿದ್ದಾರೆ

 

Please follow and like us:
error