ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಕ್ಷಮತೆಯಿಂದ ಕಾರ್ಯನಿರ್ವಹಿಸಿ : DC ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ, : ಕೋವಿಡ್-19 ನಿಯಂತ್ರಣ ಕ್ರಮದ ಅಂಗವಾಗಿ ಆರೋಗ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳನ್ನು ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸದ್ಯ ಕೋವಿಡ್ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವುದರಿಂದ ಅಧಿಕಾರಿಗಳು ಇನ್ನೂ ಹೆಚ್ಚಿನ ಕ್ಷಮತೆಯಿಂದ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರದAದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಕೋವಿಡ್ ಕರ್ತವ್ಯದಲ್ಲಿ ಹಗಲಿರುಳು ಶ್ರಮಿಸುತ್ತಿವೆ. ಪ್ರಸ್ತುತ ಇನ್ನೂ ಹೆಚ್ಚಿನ ಮಾನವ ಸಂಪನ್ಮೂಲದ ಅಗತ್ಯವಿರುವುದರಿಂದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಆದ್ದರಿಂದ ನಿಯೋಜಿತ ಅಧಿಕಾರಿಗಳು ನಿಮಗೆ ವಹಿಸಿದ ಜವಾಬ್ದಾರಿಯನ್ನು ಯಾವುದೇ ದೂರುಗಳಿಗೆ ಆಸ್ಪದವಿಲ್ಲದಂತೆ ಅಚ್ಚುಕಟ್ಟಾಗಿ ನಿರ್ವಹಿಸಿ. ಕೋವಿಡ್ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆಗಳಲ್ಲಿ ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಕಟ್ಟಡ ನಿರ್ವಹಣೆ ಕುರಿತ ಎಲ್ಲ ಜವಾಬ್ದಾರಿಗಳನ್ನು ಪಿಡಬ್ಲೂö್ಯಡಿ, ಪಿಆರ್‌ಇಡಿ, ಕೆಆರ್‌ಐಡಿಎಲ್ ಇಲಾಖೆಗಳಿಗೆ ತಾಲ್ಲೂಕುವಾರು ಹಂಚಿಕೆ ಮಾಡಲಾಗುತ್ತದೆ. ಇಲಾಖೆಗಳು ಹಂಚಿಕೆಯಾದ ಕೋವಿಡ್ ಕೇರ್ ಕೇಂದ್ರಗಳಲ್ಲಿ ಯಾವುದೇ ರೀತಿಯ ಕಟ್ಟಡ ದುರಸ್ಥಿಗೆ ಸಂಬAಧಿಸಿದ, ಮೂಲ ಭೂತ ಸೌಕರ್ಯಕ್ಕೆ ಸಂಬAಧಿಸಿದ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿಗಳನ್ನು ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಇವರು ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದೊಂದಿಗೆ ಕೋವಿಡ್ ರೋಗಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಹಾಗೂ ಅವರಿಗೆ ಕೋವಿಡ್ ಪರೀಕ್ಷೆಗಳನ್ನು ಮಾಡಿಸುವುದು, ಹೋಂ ಐಸೋಲೇಷನ್ ನಲ್ಲಿರುವ ಕೋವಿಡ್ ರೋಗಿಗಳನ್ನು ಸಮೀಪದ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಿಸುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಗ್ರಾಮಕ್ಕೆ ಮರಳಿದವರನ್ನು ಪತ್ತೆ ಹಚ್ಚಿ ಅವರನ್ನು ಕ್ವಾರಂಟೈನ್ ಕೇಂದ್ರಗಳಿಗೆ ದಾಖಲಿಸುವುದು, ಅವರನ್ನು ಪರೀಕ್ಷೆಗೊಳಪಡಿಸುವುದು, ಲಸಿಕೆ ಹಾಕಿಸಲು ಜನರನ್ನು ಲಸಿಕಾ ಕೇಂದ್ರಗಳಿಗೆ ಕರೆತರುವುದು ಸೇರಿದಂತೆ ಇತರೆ ನಿಯೋಜಿತ ಕರ್ತವ್ಯಗಳನ್ನು ಕಡ್ಡಾಯವಾಗಿ ಹಾಗೂ ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಅವರು ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.
ಹಲವು ಗ್ರಾಮಗಳಲ್ಲಿ ಶಾಲೆಗಳನ್ನು ಕೋವಿಡ್ ಕೇರ್ ಸೆಂಟರ್‌ಗಳನ್ನಾಗಿ ಮಾಡಲಾಗಿದೆ. ಅಲ್ಲಿ ಬರುವ ರೋಗಿಗಳಿಗೆ ಎಲ್ಲ ರೀತಿಯ ಅಗತ್ಯ ಮೂಲಸೌಕರ್ಯಗಳು ದೊರೆಯುವಂತೆ ಹಾಗೂ ಗ್ರಾಮಗಳಲ್ಲಿ ಕೋವಿಡ್ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯಕ್ಕೆ ಸ್ಥಳೀಯ ಶಿಕ್ಷಕರನ್ನು ನಿಯೋಜಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ವಲಸೆ ಕಾರ್ಮಿಕರ ಪತ್ತೆ, ಅವರಿಗೆ ಕಡ್ಡಾಯ ಕ್ವಾರಂಟೈನ್, ಕೋವಿಡ್ ಪರೀಕ್ಷೆ ಹಾಗೂ ಲಸಿಕೆ ನೀಡುವಿಕೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಕೋವಿಡ್ ಆಸ್ಪತ್ರೆ, ಲಸಿಕಾ ಕೇಂದ್ರಗಳು ನಿರ್ವಹಣೆ, ಲಸಿಕೆ ದಾಸ್ತಾನು, ಹಂಚಿಕೆ, ವಿತರಣೆ ಮುಂತಾದ ಕರ್ತವ್ಯಗಳಿಗೆ ನಿಯೋಜಿತ ಎಲ್ಲ ಅಧಿಕಾರಿಗಳು 24/7 ಕರ್ತವ್ಯಕ್ಕೆ ಲಭ್ಯವಿರಬೇಕು. ಕೋವಿಡ್ ರೋಗಿಗಳಿಗೆ ಯಾವುದೇ ತೊಂದರೆಯಾಗದAತೆ ಊಟ, ವಸತಿ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲ ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿಗಳಿಗೆ ಜವಾಬ್ದಾರಿ ವಹಿಸಿ ದೂರವಾಣಿ ಮೂಲಕ ಉಸ್ತುವಾರಿ ನಿರ್ವಹಿಸುವುದಲ್ಲ. ಬದಲಾಗಿ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಲೋಪ ಕಂಡುಬAದಲ್ಲಿ ಸಂಬAಧಿಸಿದ ಅಧಿಕಾರಿಯನ್ನೇ ನೇರ ಹೊಣೆ ಮಾಡಲಾಗುವುದು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಆಯುಷ್ ವೈದ್ಯಾಧಿಕಾರಿ ಡಾ.ಬಸವರಾಜ ಕುಂಬಾರ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error