ಕೋವಿಡ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಿ: ವಿಕಾಸ್ ಕಿಶೋರ್ ಸುರಳ್ಕರ್

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್-ಜಿಲ್ಲಾ ಸಂಸ್ಥೆ ಕೌನ್ಸಿಲ್ ಮಹಾಸಭೆ

ಕೊಪ್ಪಳ  : ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಸಾಮಾಜಿಕ ಶಿಸ್ತು ಮತ್ತು ಜವಾಬ್ದಾರಿ ನಿರ್ವಹಣೆಗೆ ಮಹತ್ವ ನೀಡುವ ಸಂಸ್ಥೆಯಾಗಿದ್ದು, ನಿಮ್ಮ ತಂಡಗಳಿAದ ಸಾರ್ವಜನಿಕರಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಲು ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಜಿಲ್ಲೆಯಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಜಿಲ್ಲಾ ಸಂಸ್ಥೆಯ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಸಕ್ತ ಸಾಲಿನ ಕೌನ್ಸಿಲ್ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸ್ತುತ ಕೋವಿಡ್ ಸಾಂಕ್ರಾಮಿಕವಾಗಿ ಹರಡುತ್ತಿದ್ದು, ಕೋವಿಡ್ ಹರಡುವಿಕೆ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳೊಂದಿಗೆ ಜನರಲ್ಲಿ ಕೋವಿಡ್ ಕುರಿತು ಜಾಗೃತಿಯ ಅವಶ್ಯಕತೆಯಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತಂಡಗಳೊAದಿಗೆ ಕಲಾವಿದರನ್ನು ಒಳಗೊಂಡು ತಾಲ್ಲೂಕುವಾರು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿ. ಮುಂದಿನ ಮೂರು ತಿಂಗಳುಗಳ ಕಾಲ ಪ್ರತಿ ವಾರಕ್ಕೆ ಒಂದು ಕಾರ್ಯಕ್ರಮದಂತೆ ಜಾಗೃತಿ ಕಾರ್ಯಕ್ರಮಗಳನ್ನು ರಚಿಸಿ. ಜನರು ಮಾಸ್ಕ್ ಧರಿಸುವುದರಿಂದ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಹಾಗೂ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದರಿಂದ ಉಂಟಾಗುವ ಆರೋಗ್ಯ ಲಾಭಗಳ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು. ಜಿಲ್ಲಾಡಳಿತದಿಂದ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್ವಾರು ಪ್ರಯೋಗಾಲಯ ತಂತ್ರಜ್ಞರನ್ನು ಕಳಿಸಿ ಆ ವಾರ್ಡ್ನಲ್ಲಿನ ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಆದರೆ ಸಾರ್ವಜನಿಕರಲ್ಲಿ ಈ ಕುರಿತು ಭಯ, ಗೊಂದಲಗಳಿದ್ದು, ಅವರಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವೊಲಿಸಬೇಕು. ಸ್ಲೋಗನ್‌ಗಳೊಂದಿಗೆ ಜಾಥಾ, ವಿವಿಧ ಸಭೆಗಳನ್ನು ಹಮ್ಮಿಕೊಂಡು ಜನರಿಗೆ ಕೋವಿಡ್‌ನಿಂದ ಸುರಕ್ಷಿತವಾಗಿರಲು ತಿಳಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಅನೇಕ ಉತ್ತಮ ಪ್ರವಾಸಿ ತಾಣಗಳಿದ್ದು, ಅವುಗಳ ಕುರಿತು ಬಹಳಷ್ಟು ಜನರಿಗೆ ಗೊತ್ತೇ ಇಲ್ಲ. ಆದ್ದರಿಂದ ಪ್ರವಾಸಿ ತಾಣಗಳ ಅಭಿವೃದ್ಧಿ ಮತ್ತು ಸಂರಕ್ಷಣೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರತಿನಿಧಿಗಳು ಕಾಲೇಜು ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ, ಶಿಸ್ತು ಪಾಲಿಸಲು ಕ್ರಮ ವಹಿಸಬೇಕು. ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಸ್ಥಾಪಿಸಿ, ಆ ಘಟಕಗಳನ್ನು ಕೋವಿಡ್ ಕುರಿತ ಜಾಗೃತಿ ಕಾರ್ಯಕ್ರಮ, ಪ್ರವಾಸಿ ತಾಣಗಳ ಸಂರಕ್ಷಣೆಗೆ ಬಳಸಿಕೊಳ್ಳಬೇಕು. ಪದವಿ ಮಟ್ಟದ ವಿದ್ಯಾರ್ಥಿಗಳಲ್ಲಿ ಫೇಸ್‌ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್, ಬ್ಲಾಗ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಯಾಶೀಲವಾಗಿರುವ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಅಲ್ಲಿನ ವೈಶಿಷ್ಟö್ಯಗಳ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಪ್ರಚಾರ ಮಾಡುವಂತೆ ತರಬೇತಿ ನೀಡಬೇಕು. ಹೆಚ್ಚಿನ ಪ್ರಚಾರ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪೂರಕವಾಗಿರುತ್ತದೆ. ಆದ್ದರಿಂದ ಕಾಲೇಜುಗಳಲ್ಲಿ ಘಟಕಗಳ ರಚನೆ, ಸಾಮಾಜಿಕ ಜಾಲತಾಣಗಳ ಕ್ರಿಯಾಶೀಲ ವಿದ್ಯಾರ್ಥಿಗಳ ಆಯ್ಕೆಗೆ ಕ್ರಮ ವಹಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಜಲಸಂರಕ್ಷಣೆ ಕುರಿತಾಗಿ ಪ್ರತಿ ತಾಲ್ಲೂಕುಗಳಲ್ಲಿ ಐದು ಜಲಸಂಗ್ರಾಹಕಗಳನ್ನು ಪಟ್ಟಿ ಮಾಡಲಾಗಿದೆ. ಅವುಗಳಿಗೆ ಹರಿದು ಬರುವ ಹಳ್ಳ-ಕೊಳ್ಳಗಳ ನೀರಿನ ಪ್ರದೇಶವನ್ನು(ಮಾರ್ಗವನ್ನು) ಕೆಲವರು ಅತಿಕ್ರಮಣ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕಾನೂನು ಬದ್ಧವಾಗಿ ಅತಿಕ್ರಮಣ ತೆರವುಗೊಳಿಸುವ ಕಾರ್ಯ ಆರಂಭವಾಗಲಿದೆ. ಆದರೆ ಜನರಲ್ಲಿ ನೈಸರ್ಗಿಕ ಸಂಪತ್ತಿನ ರಕ್ಷಣೆ ಕುರಿತು ಸಾಮಾಜಿಕ ಜವಾಬ್ದಾರಿ ಇರಬೇಕು. ಕಾನೂನು ಕ್ರಮಕ್ಕಿಂತ ಮೊದಲೇ ಅತಿಕ್ರಮಣದಾರರು ಸ್ವಯಂಪ್ರೇರಿತರಾಗಿ ಅತಿಕ್ರಮಣ ತೆರವುಗೊಳಿಸಬೇಕು. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು, ಅವರ ಮನವೊಲಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಯೋಜನೆ ರೂಪಿಸಿ ಎಂದು ಅವರು ಹೇಳಿದರು.
ಕೊಪ್ಪಳ ತಾಲ್ಲೂಕಿನ ಭಾಗ್ಯನಗರದಲ್ಲಿ ಗ್ರಂಥಾಲಯ ಆರಂಭವಾಗಿದ್ದು, ಅಲ್ಲಿ `ಲೆಟ್ ಅಸ್ ರೀಡ್’ (Let’s read) ಕಾರ್ಯಕ್ರಮ ಹಮ್ಮಿಕೊಂಡು ಯುವಜನರನ್ನು ಓದುವಿಕೆಯಲ್ಲಿ ತೊಡಗಿಸುವ ಉದ್ದೇಶ ಹೊಂದಿದೆ. ಪ್ರತಿ ಭಾನುವಾರ ಸಂಜೆ 07 ಗಂಟೆಯಿAದ 09 ಗಂಟೆಯವರೆಗೆ ನಾನು ಗ್ರಂಥಾಲಯಕ್ಕೆ ಭೇಟಿ ನೀಡುತ್ತಿದ್ದು, ನನ್ನೊಂದಿಗೆ ಅಲ್ಲಿನ ಯುವಜನರು ಪುಸ್ತಕಗಳನ್ನು ಓದಬಹುದು. ಈ ಕಾರ್ಯಕ್ರಮಕ್ಕೆ ಸದ್ಯದಲ್ಲಿಯೇ ಚಾಲನೆ ಸಿಗಲಿದೆ. ಕಾರ್ಯಕ್ರಮದ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಮಾಡಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ಹಿರೇಸಿಂಧೋಗಿ ಹತ್ತಿರ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಶೀಘ್ರದಲ್ಲಿಯೇ ಅದನ್ನು ಸಂಸ್ಥೆಯ ಸುಪರ್ದಿಗೆ ನೀಡಲಾಗುವುದು. ಸಂಸ್ಥೆಗೆ ತೆರಳುವ ಮಾರ್ಗದ ದುರಸ್ಥಿಗೆ ಸಂಬAಧಿಸಿದ ಇಲಾಖೆಗೆ ಪತ್ರ ಬರೆದು ಕ್ರಮ ಕೈಗೊಳ್ಳಲಾಗುವುದು. ಸಂಸ್ಥೆಯಲ್ಲಿ ಉತ್ತಮ ಶಿಸ್ತು, ಸಾಮಾಜಿಕ ಜವಾಬ್ದಾರಿ, ವಿಪತ್ತು ನಿರ್ವಹಣಾ ಕೌಶಲ್ಯ ಹೊಂದಿರುವ ತರಬೇತುದಾರರಿದ್ದು, ಜಿಲ್ಲೆಯಲ್ಲಿನ ಯುವಕರಿಗೆ ತರಬೇತಿ ನೀಡಲು ತರಬೇತಿ ಸಂಸ್ಥೆ ರಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಕಚೇರಿ ಕೆಲಸ ನಿರ್ವಹಣೆಗೆ ಅಗತ್ಯವಿರುವ ಕಟ್ಟಡ ಮಂಜೂರು ಮಾಡಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷ ಸಂಸ್ಥೆಯ 568 ಘಟಕಗಳು ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೀರಿ, ಅದರಂತೆ ಪ್ರಸ್ತುತ ಕೋವಿಡ್ ತುರ್ತು ಪರಿಸ್ಥಿತಿಯಲ್ಲಿಯೂ ಶಿಸ್ತಿನಿಂದ ಕಾರ್ಯನಿರ್ವಹಿಸಿ ಎಂದು ಅವರು ಹೇಳಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ, ಪ್ರಭಾರಿ ಡಿಡಿಪಿಯು ಜಿ.ಎಂ.ಭೂಸನೂರಮಠ, ಸಂಸ್ಥೆಯ ಉಪಾಧ್ಯಕ್ಷರಾದ ಬಸವರಾಜ ಬಳ್ಳೊಳ್ಳಿ, ಜಿಲ್ಲಾ ಉಪಾಧ್ಯಕ್ಷರಾದ ರಾಘವೇಂದ್ರ ಪಾನಗಂಟಿ, ಸ್ಕೌಟ್ ಆಯುಕ್ತರಾದ ಮಲ್ಲಿಕಾರ್ಜುನ ಚೌಕಿಮಠ, ಜಂಟಿ ಕಾರ್ಯದರ್ಶಿ ಭಾರತಿ ಹವಳೆ, ಜಿಲ್ಲಾ ಕಾರ್ಯದರ್ಶಿ ಮಾರುತಿ ಆರೇರ್, ಡಿಟಿಸಿ ಗೈಡ್ ದ್ರಾಕ್ಷಾಯಿಣಿ, ಸಹ ಕಾರ್ಯದರ್ಶಿ ಪ್ರಭಾಕರ್ ದಾಸರ್, ಸಂಸ್ಥೆಯ ತಾಲ್ಲೂಕು ಸ್ಥಾನಿಕ ಆಯುಕ್ತರು, ಖಜಾಂಚಿ, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕೌನ್ಸಿಲ್ ಸದಸ್ಯರು ಉಪಸ್ಥಿತರಿದ್ದರು.

Please follow and like us:
error