ಕೋವಿಡ್ ಪರಿಸ್ಥಿತಿಯಲ್ಲಿ ಪರಸ್ಪರ ಸಮನ್ವಯತೆಯಿಂದ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸೋಣ: ಬಿ.ಸಿ.ಪಾಟೀಲ್

74ನೇ ಸ್ವಾತಂತ್ರö್ಯ ದಿನಾಚರಣೆ

ಕೊಪ್ಪಳ, ಆ: ಕೋವಿಡ್‌ನಂತಹ ತುರ್ತು ಪರಿಸ್ಥಿತಿ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆ ಆಗದಂತೆ ಪರಸ್ಪರ ಸಮನ್ವಯತೆಯಿಂದ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸೋಣ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ 74ನೇ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಅವರು ಮಾತನಾಡಿದರು.
ಕೋವಿಡ್‌ನಂತಹ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿರ‍್ಸ್ಗಳ ಸೇವೆಯನ್ನು ನಾವು ಗುರುತಿಸಿ, ಗೌರವಿಸಬೇಕು. ಇದರೊಂದಿಗೆ ಜಿಲ್ಲೆಯ ಸರ್ವೋತೋಮುಖ ಅಭಿವೃದ್ಧಿಗೆ ಸರ್ಕಾರದ ಎಲ್ಲ ಇಲಾಖೆಗಳು ಪರಸ್ಪರ ಸಹಕಾರ, ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರದಿಂದ ಕೋವಿಡ್-19 ನಿರ್ಬಂಧಿತ ಅವಧಿಯಲ್ಲಿ ಮುಸುಕಿನ ಜೋಳ ಬೆಳೆದ 20,646 ರೈತರಿಗೆ 10.32 ಕೋಟಿ ನಗದು ಹಾಗೂ ಪಿ.ಎಂ ಕಿಸಾನ್ ಯೋಜನೆಯಡಿಯಲ್ಲಿ 1,50,634 ರೈತರಿಗೆ ಸಹಾಯ ಧನ, ಏಪ್ರಿಲ್ ಮತ್ತು ಮೇ ಮಾಹೆಯಲ್ಲಿ ಅಕಾಲಿಕ ಆಲಿಕಲ್ಲು ಮಳೆಯಿಂದ ಜಿಲ್ಲೆಯಲ್ಲಿ ಹಾನಿಯಾದ ಭತ್ತದ ಬೆಳೆಗಾರರಿಗೆ 22.68 ಕೋಟಿ ಪರಿಹಾರ ನೀಡಲಾಗಿದೆ. ಮುಂಗಾರು ಹಂಗಾಮಿಗೆ ಬಿತ್ತನೆ ಬೀಜಕ್ಕೆ ಈಗಾಗಲೇ 6 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕೃಷಿ, ಕಂದಾಯ, ತೋಟಗಾರಿಕೆ, ಅರಣ್ಯ ಹಾಗು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಮನ್ವಯತೆಯಿಂದ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಅನೇಕ ಕೃಷಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅತ್ಯಧಿಕ ಮಾನವ ದಿನಗಳನ್ನು ನಿರ್ಮಿಸುವಲ್ಲಿ ಕೊಪ್ಪಳ ಜಿಲ್ಲೆಯು ರಾಜ್ಯದ ಗಮನ ಸೆಳೆದಿದೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ ನನಗೆ ನೀಡಿದ ಅನುದಾನದಲ್ಲಿ ಜಿಲ್ಲೆಯಲ್ಲಿ ಹೋಬಳಿಗೆ ಒಂದರAತೆ 20 ಸಂಚಾರಿ ಕೃಷಿ ಆರೋಗ್ಯ ವಾಹನಗಳನ್ನು ರೂ. 4 ಕೋಟಿ ವೆಚ್ಚದಲ್ಲಿ ದೇಶದಲ್ಲಿಯೇ ಪ್ರಥಮವಾಗಿ ಕೊಪ್ಪಳ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಗೃಹರಕ್ಷಕದಳ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿAದ ಪಥಸಂಚಲನ ಹಾಗೂ ಸಚಿವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ಸಾಧಕರಿಗೆ ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಸಾಧಕರಿಗೆ ಜಿಲ್ಲಾಡಳಿತ ಮತ್ತು ಜಿ.ಪಂ. ವತಿಯಿಂದ ಸನ್ಮಾನಿಸಲಾಯಿತು.
ಕೋವಿಡ್-19 ವಾರಿರ‍್ಸ್ಗಳಾಗಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಾದ ಚಂದ್ರಕಾAತ, ಹರ್ಷವರ್ಧನ್, ಪ್ರಕಾಶ್, ತೇಜಸ್ವಿ ಮಗಲದ್, ಸಂತೋಷ್ ತಳವಾರ, ಕವಿತಾ, ಕಂದಾಯ ಇಲಾಖೆ ಸಿಬ್ಬಂದಿಗಳಾದ ಆಸಿಫ್ ಮತ್ತು ವೇಲಪ್ಪನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಮ್ತಾಜ್ ಬೇಗಂ, ಈ.ಕ.ರ.ಸಾ. ಸಂಸ್ಥೆಯ ವಿಭಾಗೀಯ ನಿಯಂತ್ರಕರಾದ ಎಂ.ಎ. ಮುಲ್ಲಾ, ಶಿಕ್ಷಣ ಇಲಾಖೆಯ ಲಿಂಗಪ್ಪ ದನದಮನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕರಾದ ಶರಣಪ್ಪ ಕೋವಿ, ಸಮಾಜ ಕಲ್ಯಾಣ ಇಲಾಖೆಯ ದ್ಯಾಮಣ್ಣ ಕರೇಕಲ್, ತಳಕಲ್‌ನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಸತಿ ನಿಲಯದ ರಾಮಣ್ಣ ಅಮರಪ್ಪ ಚಲವಾದಿ, ಗಂಗಾವತಿ ಪೌರಾಡಳಿತ ಇಲಾಖೆಯ ನಾಗರಾಜ ಎ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾಶಿನಾಥ, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಕವಿತಾ ಎಚ್.ಎಸ್ ಅವರನ್ನು ಸನ್ಮಾನಿಸಲಾಯಿತು.
2019-20 ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಕವಿತಾ ಮೇಟಿ, ಗಂಗಾವತಿ ಬೇತಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಜ್ಯೋತಿ ಹುಸೇನಪ್ಪ, ಗಂಗಾವತಿ ವಿದ್ಯಾನಿಕೇತನ ಪ.ಪೂ.ಕಾಲೇಜಿನ ವಿಜ್ಞಾನ ವಿಭಾಗದ ಅಲ್ಲಮಪ್ರಭು ಅವರನ್ನು ಸನ್ಮಾನಿಸಲಾಯಿತು.
2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಕುಕನೂರಿನ ಎಸ್.ಎಫ್.ಎಸ್. ಶಾಲೆಯ ವಿಜಯಲಕ್ಷ್ಮಿ ಬೇಲೇರಿ, ದ್ವಿತೀಯ ಸ್ಥಾನ ಪಡೆದ ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಮೀರ್ ಹವಾಲ್ದಾರ್, ತೃತೀಯ ಸ್ಥಾನ ಪಡೆದ ಶ್ರೀರಾಮನಗರದ ಶ್ರೀಮತಿ ದೋಣಿಪುಡಿ ಸರೋಜಿನಿದೇವಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪುಷ್ಪಾವತಿ ಅವರನ್ನು ಸನ್ಮಾನಿಸಲಾಯಿತು.
ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಗಂಗಾವತಿಯ ವಿನೋದ್ ಎಚ್. ಪಾಟೀಲ್(132ನೇ ರ‍್ಯಾಂಕ್), ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮದ ರಮೇಶ್ ಯಮನಪ್ಪ(646ನೇ ರ‍್ಯಾಂಕ್) ಇವರನ್ನು ಸನ್ಮಾನಿಸಲಾಯಿತು.
ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿನ ವಸತಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಕಾಟಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಾಗರ ಈಳಿಗೇರ ಮತ್ತು ದ್ವಿತೀಯ ಸ್ಥಾನ ಪಡೆದ ತಾವರಗೇರಾದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಭವ್ಯಶ್ರೀ ಅವರನ್ನು ಸನ್ಮಾನಿಸಲಾಯಿತು.
ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ ನಡೆಸಬಹುದಾಗಿದೆ ಎಂದು ಕಿರುಚಿತ್ರದ ಮೂಲಕ ತೋರಿಸಿಕೊಟ್ಟ ತಂಡಕ್ಕೆ ಹಾಗೂ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ 2019-20 ಹಾಗೂ ಪ್ರಸಕ್ತ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ಕುಷ್ಟಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಯಲಬುರ್ಗಾ ತಾ.ಪಂ ಸಹಾಯಕ ನಿರ್ದೇಶಕರು(ಗ್ರಾ.ಉ), ಕೊಪ್ಪಳ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು, ಗಂಗಾವತಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೊಪ್ಪಳ ತಾ.ಪಂ.ನ ತಾಂತ್ರಿಕ ಸಂಯೋಜಕರಿಗೆ ಸನ್ಮಾನಿಸಲಾಯಿತು.
ನಂತರ ಬೆಳೆ ಸಮೀಕ್ಷೆ ಉತ್ಸವ-2020 ರ ಮೊಬೈಲ್ ಆಪ್ ಮಾಹಿತಿ ರಥಕ್ಕೆ ಸಚಿವರಾದ ಬಿ.ಸಿ.ಪಾಟೀಲ್ ಚಾಲನೆ ನೀಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ ಅಧ್ಯಕ್ಷ ಎಚ್.ವಿಶ್ವನಾಥ ರೆಡ್ಡಿ, ಸಂಸದರಾದ ಸಂಗಣ್ಣ ಕರಡಿ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ತಾ.ಪಂ. ಅಧ್ಯಕ್ಷ ಬಾಲಚಂದ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿ.ಪಂ. ಸಿಇಒ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ತಹಶೀಲ್ದಾರ ಜೆ.ಬಿ. ಮಜ್ಗಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮನ್ನವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us:
error