ಕೋವಿಡ್ ಪರೀಕ್ಷೆ ಹೆಚ್ಚಿನ ಶುಲ್ಕ ವಿಧಿಸಿದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ -ಸಚಿವ ಕೆ.ಸುಧಾಕರ್

 

ಖಾಸಗಿ ಲ್ಯಾಬ್ ಮತ್ತು ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆಗಾಗಿ ₹4500 ಗರಿಷ್ಠ ದರವನ್ನು ನಿಗದಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಗಳವರು ಹೆಚ್ಚಿನ ಶುಲ್ಕ ಪಡೆಯುತ್ತಿದ್ದಾರೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಸುಧಾಕರ್  ನಿಗದಿತ ದರಕ್ಕಿಂತ ಹೆಚ್ಚಿನ ದರ ವಿಧಿಸಿದ ಖಾಸಗಿ ಆಸ್ಪತ್ರೆಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ನಿಯಮವನ್ನು ಉಲ್ಲಂಘಿಸುವ ಖಾಸಗಿ ಆಸ್ಪತ್ರೆ ಹಾಗು ಲ್ಯಾಬ್ ಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

Please follow and like us:
error