ಕೋವಿಡ್ ಸೋಂಕು ಪ್ರಮಾಣ ತಗ್ಗಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ : ಬಿ.ಸಿ.ಪಾಟೀಲ್


ಕೊಪ್ಪಳ,  : ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹಾಗೂ ಸೋಂಕಿನಿAದ ಮರಣ ಹೊಂದುವವರ ಪ್ರಮಾಣ ಕಡಿಮೆ ಮಾಡುವುದರಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ಸಂಬAಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಇನ್ನೂ ಹೆಚ್ಚಿನ ಜವಾಬ್ದಾರಿಯೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮೊದಲನೇ ತ್ರೆöÊಮಾಸಿಕ(ಕೆ.ಡಿ.ಪಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊಪ್ಪಳ ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ ಮತ್ತು ಸೋಂಕಿನಿAದ ಹಾಗೂ ಆಕ್ಸಿಜನ್ ಕೊರತೆಯಿಂದ ಮರಣ ಹೊಂದುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಕಾರಣಗಳೇನು ಎಂಬುದನ್ನು ವೈದ್ಯರು ತಿಳಿಸಬೇಕು. ಜಿಲ್ಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳು ಆಕ್ಸಿಜನ್ ಕೊರತೆ ಹಾಗೂ ಅಗತ್ಯ ಚಿಕಿತ್ಸೆಯ ಕೊರತೆಯಿಂದ ಸಾವನ್ನಪ್ಪುತ್ತಿದ್ದಾರೆ ಎಂಬ ದೂರುಗಳಿವೆ. ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸರ್ಕಾರದಿಂದ ಅಗತ್ಯ ಅನುದಾನ ನೀಡಲಾಗಿದ್ದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ವೈದ್ಯರು, ಜಿಲ್ಲಾಡಳಿತ ಮುಂದಾಗುತ್ತಿಲ್ಲ. ಇದರಿಂದ ಜಿಲ್ಲೆಯಲ್ಲಿ ಸೋಂಕು ಹಾಗೂ ಮರಣ ಪ್ರಮಾಣ ಹೆಚ್ಚಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಅವ್ಯವಸ್ಥೆಯಿಂದ ರೋಗಿಗಳು ಆಸ್ಪತ್ರೆ ಆವರಣದಲ್ಲಿಯೇ ಮರಣ ಹೊಂದುತ್ತಿದ್ದಾರೆ ಎಂದು ಜಿಲ್ಲೆಯ ಶಾಸಕರು, ಸಾರ್ವಜನಿಕರು ಆರೋಪಿಸಿದ್ದಾರೆ ಇದಕ್ಕೆ ವೈದ್ಯಾಧಿಕಾರಿಗಳು ಉತ್ತರ ನೀಡಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ವಹಣೆ, ಸ್ವಚ್ಛತೆ, ಸೂಕ್ತ ಚಿಕಿತ್ಸೆ ಹಾಗೂ ಆಕ್ಸಿಜನ್ ಸರಬರಾಜಿಗೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕು. ಮುಂದಿನ 24 ಗಂಟೆಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೆಂಟಿಲೇಟರ್ ಕೊರತೆಯಿಂದ ಯಲಬುರ್ಗಾ ತಾಲ್ಲೂಕು ಹಾಗೂ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳು ಮರಣ ಹೊಂದುತ್ತಿದ್ದು ಇದರಿಂದ ಸಾರ್ವಜನಿಕರಲ್ಲಿ ಆಸ್ಪತ್ರೆ ಕುರಿತು ಆತಂಕ, ಭಯ ಹೆಚ್ಚಾಗಿದೆ ಎಂದು ಆರೋಪಿಸಿದ ಶಾಸಕ ಹಾಲಪ್ಪ ಆಚಾರ ಅವರಿಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಗಮನಿಸಿದಂತೆ ಗ್ರಾಮೀಣ ಭಾಗಗಳಲ್ಲಿ ಬಹುತೇಕ ಜನರು ಮಾಸ್ಕ್ ಧರಿಸುವುದಿಲ್ಲ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದಿಲ್ಲ. ಇದರಿಂದ ಸೋಂಕು ಹರಡುವಿಕೆ ಹೆಚ್ಚಾಗುತ್ತದೆ. ಆದ್ದರಿಂದ ಜಿಲ್ಲಾಡಳಿತ ಮಾಸ್ಕ್ ಧರಿಸಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಮುಖ್ಯವಾಗಿ ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ತಿಳುವಳಿಕೆ ಮೂಡಿಸಬೇಕು. ಹಾಗೆಯೇ ವೈದ್ಯಾಧಿಕಾರಿಗಳು ತಮ್ಮಲ್ಲಿ ಬರುವ ರೋಗಿಗಳಿಗೆ ಮೊದಲು ಚಿಕಿತ್ಸೆ ನೀಡಿ, ಲಕ್ಷಣಗಳ ಆಧಾರದಲ್ಲಿ ರೋಗವನ್ನು ನಿರ್ಧರಿಸಿ ಅದಕ್ಕೆ ತಕ್ಕಂತೆ ಚಿಕಿತ್ಸೆ ನೀಡಬೇಕು. ಉಸಿರಾಟದ ತೊಂದರೆ ಇರುವ ರೋಗಿಗಳಿಗೆ ಅಗತ್ಯವಾಗಿರುವ ಆಕ್ಸಿಜನ್ ಅನ್ನು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಬೇಕು. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈಗಾಗಲೇ ಒದಗಿಸಲಾಗಿರುವ ವೆಂಟಿಲೇಟರ್‌ಗಳನ್ನು ಇನ್‌ಸ್ಟಾಲ್ ಮಾಡಿಸಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಪ್ರಕರಣ ಪತ್ತೆಯಾದ ಮೇಲೆ ಅವರ ಮನೆಯ ಸುತ್ತ ಸ್ಯಾನಿಟೈಸ್ ಮಾಡಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿರುವ ಕುರಿತು ದೂರುಗಳಿವೆ. ಆದ್ದರಿಂದ ಎಲ್ಲಾ ತಾಲ್ಲೂಕುಗಳ ಇಒ ಗಳು ಹಾಗೂ ಪಿಡಿಒಗಳು ಸೋಂಕು ಪತ್ತೆಯಾದ ಕೂಡಲೇ ಆ ಪ್ರದೇಶದ ಸ್ಯಾನಿಟೈಜೇಶನ್‌ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಮಹರ್ಷಿ ವಾಲ್ಮೀಕಿ ನಿಗಮ, ಡಾ.ಬಿ.ಆರ್.ಅಂಬೇಡ್ಕರ್ ನಿಗಮ ಮುಂತಾದ ನಿಗಮಗಳಲ್ಲಿ ವಿವಿಧ ಯೋಜನೆಗಳಡಿ ರೈತರಿಗೆ ಬೋರ್‌ವೆಲ್ ಕೊರೆಸಿಕೊಡಲು ನಿಗಮದ ಅಧಿಕಾರಿ ಹಾಗೂ ಜೆಸ್ಕಾಂ ಅಧಿಕಾರಿಗಳಿಗೆ ಪರಸ್ಪರ ಸಮನ್ವಯತೆ ಇಲ್ಲ. ಇದರಿಂದ ರೈತರು ಬಲಿಪಶುಗಳಾಗುತ್ತಿದ್ದಾರೆ. ಆದ್ದರಿಂದ ಜಿಲ್ಲೆಯ ಇಲಾಖಾ ಅಧಿಕಾರಿಗಳು ಮೊದಲು ಪರಸ್ಪರ ಸಮನ್ವಯತೆಯನ್ನು ರೂಢಿಸಿಕೊಳ್ಳಿ. ಸರ್ಕಾರಿ ಸೇವೆಯಲ್ಲಿ ಜನರಿಗೆ ಸರ್ಕಾರದ ಸೌಲಭ್ಯ ಒದಗಿಸಲು ಒಂದೇ ಇಲಾಖೆಯಿಂದ ಸಾಧ್ಯವಿಲ್ಲ. ಅದಕ್ಕೆ ಪೂರಕವಾಗಿ ಇತರ ಇಲಾಖೆಗಳೂ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆದ್ದರಿಂದ ಇಲಾಖೆಗಳ ನಡುವೆ ಸಮನ್ವಯತೆ ಕಾಪಾಡಿಕೊಳ್ಳಿ. ಗ್ರಾಮೀಣ ಭಾಗದಲ್ಲಿ ಸುಟ್ಟು ಹೋದ ಅಥವಾ ದುರಸ್ಥಿಗೆ ಬಂದಿರುವ ವಿದ್ಯುತ್ ಪರಿವರ್ತಕಗಳ ದುರಸ್ಥಿ ಹಾಗೂ ಬದಲಿ ಟ್ರಾನ್ಸ್ಫಾರ್ಮರ್ ಅಳವಡಿಸಲು ಜೆಸ್ಕಾಂ ಇಲಾಖೆಯವರು ಕೂಡಲೇ ಕ್ರಮ ವಹಿಸಬೇಕು. ನಿಗಮದ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ ಫಲಾನುಭವಿಗೆ ಉಂಟಾದ ತೊಂದರೆಯನ್ನು ಉಲ್ಲೇಖಿಸಿದ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರಿಗೆ ಪ್ರತಿಕ್ರಿಯಿಸಿದ ಸಚಿವರು, ನಿಗಮಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿ ಫಲಾನುಭವಿಗಳನ್ನು ಆಯ್ಕೆ ಮಾಡುವಾಗಲೇ ಕೂಲಂಕಷವಾಗಿ ಪರಿಶೀಲಿಸಿ ಆಯ್ಕೆ ಮಾಡಿ. ಆಯ್ಕೆಯಾದ ನಂತರ ಫಲಾನುಭವಿಗಳ ಪಟ್ಟಿಯಿಂದ ಅವರನ್ನು ಕೈಬಿಟ್ಟರೆ ಇಲಾಖೆ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಆದ್ದರಿಂದ ಫಲಾನುಭವಿಗಳ ಆಯ್ಕೆಯಲ್ಲಿ ಎಚ್ಚರಿಕೆ ಹಾಗು ಸರ್ಕಾರಿ ನಿಯಮಗಳ ಪಾಲನೆ ಕಡ್ಡಾಯ ಎಂದು ಅವರು ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಕೆ.ಕೆ.ಆರ್‌ಡಿ.ಬಿ ಅಡಿ ಜಿಲ್ಲೆಗೆ ಬಿಡುಗಡೆಯಾದ ಅನುದಾನದಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತರೂ ಅನುಷ್ಠಾನ ಏಜೆನ್ಸಿಗಳ ವಿಳಂಬ ನೀತಿಯಿಂದ ಕಾಮಗಾರಿಗಳು ಬಾಕಿ ಉಳಿಯುತ್ತಿದ್ದು, ಶಾಲಾ, ಕಾಲೇಜು ಕಟ್ಟಡಗಳ ನಿರ್ಮಾಣ, ವಸತಿ ಶಾಲೆಗಳ ಕಟ್ಟಡಗಳ ನಿರ್ಮಾಣ, ರಸ್ತೆಗಳ ಅಭಿವೃದ್ಧಿ ಮುಂತಾದವು ನೆನೆಗುದಿಗೆ ಬೀಳುತ್ತಿವೆ. ಇದರಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತವಾಗುತ್ತದೆ. ಆದ್ದರಿಂದ ಆಡಳಿತಾತ್ಮಕ ಅನುಮೋದನೆ ದೊರೆತ ನಂತರ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಬೇಕು. ಸಿಬ್ಬಂದಿ ಕೊರತೆ ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಇದೆ. ಸಿಬ್ಬಂದಿ ಕೊರತೆಯನ್ನೇ ಮುಖ್ಯ ಕಾರಣವಾಗಿಟ್ಟುಕೊಂಡು ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸುವಂತಿಲ್ಲ. ಯಾವುದೇ ಇಲಾಖೆಗಳಲ್ಲಿ ಅಧಿಕಾರಿಗಳ ತೀರ್ಮಾನವೇ ಅಂತಿಮವಲ್ಲ. ಸರ್ಕಾರದ ಎಲ್ಲ ಕೆಲಸಗಳಿಗೂ ಅದರದೇ ಆದ ನಿಯಮಾವಳಿಗಳಿವೆ. ಇದಕ್ಕೆ ಯಾರೂ ಹೊರತಲ್ಲ. ಅಧಿಕಾರಿಗಳು ಇದನ್ನು ಅರಿತುಕೊಂಡು ಜಿಲ್ಲಾಧಿಕಾರಿಗಳು, ಸಂಬAಧಿಸಿದ ಕ್ಷೇತ್ರದ ಶಾಸಕರು, ಸಚಿವರನ್ನು ಸಂಪರ್ಕಿಸಿ ಅಗತ್ಯ ಮಾರ್ಗದರ್ಶನದೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ರಸಗೊಬ್ಬರಗಳ ವಿತರಣೆ ಸಮರ್ಪಕವಾಗಿ ಆಗುತ್ತಿಲ್ಲ ಎಂದು ಶಾಸಕರು ಆರೋಪಿಸುತ್ತಾರೆ ಹಾಗೂ ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟವಾಗುತ್ತಿದೆ ಎಂದು ಮಾಧ್ಯಮಗಳು ವರದಿಯನ್ನೂ ಮಾಡಿವೆ. ಇದಕ್ಕೆ ಕೃಷಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನ ಕಾರಣ. ಏಕೆಂದರೆ ರಾಜ್ಯ ಮಟ್ಟದಲ್ಲಿ ನಿಗದಿತ ಪ್ರಮಾಣದ ರಸಗೊಬ್ಬರವನ್ನು ಜಿಲ್ಲೆಗೆ ತರಿಸಿಕೊಳ್ಳುವಲ್ಲಿ ಹಾಗೂ ಅದನ್ನು ರೈತರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸುತ್ತಿಲ್ಲ. ಜಿಲ್ಲೆಗೆ ಇನ್ನೂ ಎರಡು ಸಾವಿರ ಟನ್ ರಸಗೊಬ್ಬರ ಬರುವುದಿದ್ದು, ಜಂಟಿ ಕೃಷಿ ನಿರ್ದೇಶಕರು ಅದನ್ನು ಸೊಸೈಟಿಗಳಿಗೆ ಹಾಗೂ ಡೀಲರ್‌ಗಳಿಗೆ ಸಮಪ್ರಮಾಣದಲ್ಲಿ ಹಂಚಿಕೆ ಮಾಡಿ ಅರ್ಹ ರೈತರಿಗೇ ತಲುಪುವಂತೆ ಕ್ರಮ ವಹಿಸಬೇಕು. ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟಕ್ಕೆ ಅವಕಾಶ ನೀಡಬಾರದು. ಪ್ರಸಕ್ತ ವರ್ಷ ರೈತರೇ ಸ್ವತಃ ತಮ್ಮ ಬೆಳೆಗಳ ಸಮೀಕ್ಷೆ ನಡೆಸಲು ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಪ್ರಗತಿ ಕಂಡುಬAದಿಲ್ಲ. ಆದ್ದರಿಂದ ಕೃಷಿ ಇಲಾಖೆ ಅಧಿಕಾರಿಗಳು ನೇರವಾಗಿ ರೈತರ ಬಳಿಗೆ ತೆರಳಿ ಅವರಿಗೆ ಮಾರ್ಗದರ್ಶನ ನೀಡುವುದರ ಮೂಲಕ ಸಮೀಕ್ಷೆಯ ಕೊನೆಯ ದಿನದೊಳಗಾಗಿ ಜಿಲ್ಲೆಯ ಎಲ್ಲ ರೈತರೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಕ್ರಮ ವಹಿಸಿ. ಪಿಓಎಸ್(ಪಾಯಿಂಟ್ ಆಫ್ ಸೇಲ್) ಕುರಿತು ಪಾಸ್‌ಬುಕ್‌ಗಳಲ್ಲಿ ನಮೂದಿಸಿ. ಇದರಿಂದ ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಬ್ಸಿಡಿ ಪಡೆಯಲು ಅನುಕೂಲವಾಗುತ್ತದೆ. ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಅರ್ಹರಿಗೆ ಕೂಡಲೇ ಪರಿಹಾರ ಒದಗಿಸಿ. ಅರ್ಹರಲ್ಲದವರಿಗೆ ಕಾರಣ ಸಹಿತ ಪತ್ರ ಬರೆದು ಅರ್ಜಿ ತಿರಸ್ಕರಿಸಿ. ಈ ಕುರಿತು ಸಂಬAಧಿಸಿದ ತಾಲ್ಲೂಕಿನ ಶಾಸಕರಿಗೆ ಮಾಹಿತಿಯನ್ನೂ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಅಕ್ರಮ ಪಡಿತರ ಹಾಗೂ ಅಕ್ರಮ ಅಕ್ಕಿ ದಾಸ್ತಾನು ಕುರಿತು ಪ್ರಕರಣಗಳು ಕಂಡುಬರುತ್ತಿವೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಸಂಬAಧಿಸಿದ ತಾಲ್ಲೂಕಿನ ತಹಶೀಲ್ದಾರರು, ಪೊಲೀಸ್ ಅಧಿಕಾರಿಗಳೊಂದಿಗೆ ದಾಳಿ ನಡೆಸಿ ಅಕ್ರಮ ದಾಸ್ತಾನನ್ನು ಜಪ್ತಿ ಮಾಡಿ. ಇದಕ್ಕೆ ಸಂಬAಧಿಸಿದAತೆ ಗಂಗಾವತಿ ತಾಲ್ಲೂಕಿನಲ್ಲಿನ ಪ್ರಕರಣದ ಕುರಿತು ಒಂದು ವಾರದೊಳಗೆ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸಿ ಎಂದು ಸಂಬAಧಿಸಿದ ಅಧಿಕಾರಿಗೆ ಸೂಚಿಸಿದರು.
ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದ ರೈತರ ನೆರವಿಗೆ ಸರ್ಕಾರ ವಿವಿಧ ಪರಿಹಾರಧನ, ಸಹಾಯಧನದ ಘೋಷಣೆ ಮಾಡಿದ್ದು, ಅದರಂತೆ ಜಿಲ್ಲೆಯ ತೋಟಗಾರಿಕಾ ಬೆಳೆಗಳ ಸಮೀಕ್ಷೆಯಲ್ಲಿ ಅರ್ಹರಾದ ರೈತರಿಗೆ ಪರಿಹಾರ ಮೊತ್ತ ತಲುಪಲು ತೋಟಗಾರಿಕಾ ಉಪನಿರ್ದೇಶಕರು ಕ್ರಮ ಕೈಗೊಳ್ಳಬೇಕು. ಜಾನುವಾರುಗಳಲ್ಲಿ ಲಂಪಿಸ್ ಎಸ್.ಎಸ್.ಡಿ ರೋಗ ಕಂಡುಬರುತ್ತಿದ್ದು, ಇದರಿಂದ ಗ್ರಾಮೀಣ ಜನರು ಆತಂಕಕ್ಕೆ ಒಳಗಾಗಿದ್ದಾರೆ ಆದ್ದರಿಂದ ಈ ರೋಗದ ಚಿಕಿತ್ಸೆ ಹಾಗೂ ಮುನ್ನೆಚ್ಚರಿಕೆಯಾಗಿ ರೈತರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ, ಹಸುಗಳಿಗೆ ನೀಡಬೇಕಾದ ಲಸಿಕೆ ಅಥವಾ ಔಷಧಗಳ ಬಗ್ಗೆ ಪಶುಪಾಲನಾ ಹಾಗೂ ಪಶುವೈದ್ಯಕೀಯ ಅಧಿಕಾರಿಗಳು ಜಾಗೃತಿ ಹಾಗೂ ಚಿಕಿತ್ಸೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚಿಸಿದ ಸಚಿವರು ಈ ಬಾರಿಯ ಕೆ.ಡಿ.ಪಿ ಸಭೆ ನನಗೆ ತೃಪ್ತಿ ತಂದಿಲ್ಲ. ಅಧಿಕಾರಿಗಳು ಸಭೆಗೆ ಬರುವಾಗ ಅಗತ್ಯ ಮಾಹಿತಿಯೊಂದಿಗೆ ಬರಬೇಕು. ನಿಮ್ಮ ಇಲಾಖೆಯ ಕುರಿತು ನಿಮಗೇ ಮಾಹಿತಿ ಇಲ್ಲವೆಂದರೆ ಸಭೆಗೆ ಸಮಯ ಕಳೆಯಲು ಅಥವಾ ಕಾಟಾಚಾರಕ್ಕೆ ಬರುತ್ತೀರಾ ಎಂದು ಪ್ರಸಶ್ನಿಸಿದ ಸಚಿವರು, ಜವಬ್ದಾರಿಯಿಂದ ಕರ್ತವ್ಯ ನಿರ್ವಹಿಸದಿದ್ದರೆ ಸಕಾರದ ನಿಯಮಗಳನ್ವಯ ಕಾನೂನು ಕ್ರಮಗಳಿಗೆ ತುತ್ತಾಗುತ್ತೀರಿ ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಪಂಚಾಯತನ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.

Please follow and like us:
error