ಕೋವಿಡ್19 ಆಸ್ಪತ್ರೆಯಲ್ಲಿ ಕರೋನ ಸೋಂಕಿತ ಯುವಕ  ನೇಣಿಗೆ ಶರಣು!

Kannadanet ಕೊಪ್ಪಳ : ನಗರದ ಕೋವಿಡ್19 ಆಸ್ಪತ್ರೆಯಲ್ಲಿ ಕರೋನ ಸೋಂಕಿತ ಯುವಕ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕು ಚಿಕ್ಕಬೀಡನಾಳ ಗ್ರಾಮದ ಮಾರುತಿ(26) ಆತ್ಮಹತ್ಯೆ

ಮಾಡಿಕೊಂಡಿರುವ ಯುವಕ. ಕಳೆದ ಸೆಪ್ಟೆಂಬರ್ 14 ರಂದು ಕೋವಿಡ್19 ಆಸ್ಪತ್ರೆಗೆ ದಾಖಲಾಗಿದ್ದ ಯುವಕ, ಆಸ್ಪತ್ರೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡಿದ್ದಾನೆ. ಈ ಮೊದಲು ಕೊಪ್ಪಳದ ಪುಷ್ಕರ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ನಿನ್ನೆ ರಾತ್ರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದರೂ, ಆಸ್ಪತ್ರೆ ಸಿಬ್ಬಂದಿ ಕುಟುಂಬಕ್ಕೆ ಮಾಹಿತಿ ನೀಡಿಲ್ಲ ಎಂದು ಮೃತ ಯುವಕನ ಕುಟುಂಬದ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Please follow and like us:
error