ಕೊಪ್ಪಳ, : ಭಾರತ ಚುನಾವಣಾ ಆಯೋಗವ ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ. ಅಕ್ಟೋಬರ್ 01 ರಂದು ಚುನಾವಣಾ ಅಧಿಸೂಚನೆ ಹೊರಡಿಸಿದ್ದು, ಅ.01 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 08 ಕೊನೆಯ ದಿನವಾಗಿದೆ. ಅ.09 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ.12 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅ. 28 ರಂದು ಚುನಾವಣೆ ನಡೆಯಲಿದ್ದು, ಅಂದು ಬೆಳಿಗ್ಗೆ 08 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಮತದಾನ ನಡೆಯಲಿದೆ. ನವೆಂಬರ್ 02 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಕೊಪ್ಪಳ ಜಿಲ್ಲೆಯಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 20 ಮತದಾನ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರಸ್ತುತ ಮತದಾರರ ಪಟ್ಟಿಯಲ್ಲಿ ಒಟ್ಟು 2,330 ಮತದಾರರು ನೋಂದಾಯಿಸಿಕೊAಡಿರುತ್ತಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಕಲಚೇತನರು ಹಾಗೂ ಕೋವಿಡ್-19 ಶಂಕಿತ/ಸೋAಕಿತ ಮತದಾರರು ಅಂಚೆಯ ಮೂಲಕ ಮತಚಲಾಯಿಸಲು ಇಚ್ಛಿಸಿದಲ್ಲಿ, ನಿಗದಿತ ನಮೂನೆ-12ಡಿ ಅರ್ಜಿಯೊಂದಿಗೆ ನೋಡಲ್ ಅಧಿಕಾರಿಗಳಿಂದ ದೃಢೀಕರಿಸಲ್ಪಟ್ಟ ದಾಖಲೆಗಳೊಂದಿಗೆ ಮಾಹಿತಿಯನ್ನು ಅಕ್ಟೋಬರ್.05 ರೊಳಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು. ನಮೂನೆ-12ಡಿ ಅರ್ಜಿಗಳನ್ನು ಸಂಬAಧಪಟ್ಟ ತಹಶೀಲ್ದಾರರ ಕಚೇರಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಂದ ಪಡೆದುಕೊಳ್ಳಬೇಕು ತಿಳಿಸಿದ್ದಾರೆ.
ಕ.ವಿ.ಪ. ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ : ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ
Please follow and like us: