ಬೆಂಗಳೂರು : ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕವನ್ನು ಹೆಚ್ಚಿಸಿ, ವಿದ್ಯಾರ್ಥಿಗಳಿಂದ ವಸೂಲು ಮಾಡುತ್ತಿರುವ ದೂರುಗಳು ಬರುತ್ತಿವೆ. ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವರು ತಕ್ಷಣ ಗಮನಹರಿಸಿ ಶಿಕ್ಷಣ ಸಂಸ್ಥೆಗಳ ಲೂಟಿಯನ್ನು ನಿಲ್ಲಿಸಿ ಕ್ರಮಕೈಗೊಳ್ಳಬೇಕು ಎಂದು ಟ್ವೀಟ್ ಮಾಡುವ ಮೂಲಕ ಆಗ್ರಹಿಸಿದ್ದಾರೆ.
ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ ಲೈನ್ ಶಿಕ್ಷಣವನ್ನು ಕೂಡಾ ದುಡ್ಡುಮಾಡುವ ಹೊಸ ದಂದೆಯಾಗಿ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಹಂತದಲ್ಲಿಯೇ ಶುರುವಾಗಿರುವ ಹಾವಳಿಯನ್ನು ಈ ಹಂತದಲ್ಲಿಯೇ ನಿಯಂತ್ರಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
Please follow and like us: