ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ : ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ  : ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ವ್ಯವಸ್ಥಿತ ತಯಾರಿ ಮಾಡಿಕೊಂಡು, ಕಾರ್ಯಕ್ರಮವನ್ನು ಅಚ್ಚುಕಟ್ಟುಗೊಳಿಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೇಂದ್ರದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಆಚರಿಸುವ ಅಂಗವಾಗಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣರಾಜ್ಯೋತ್ಸವದ ದಿನದಂದು ಬೆಳಿಗ್ಗೆ 08 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಹಾಗೂ ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟç ಧ್ವಜಾರೋಹಣ ನಡೆಯಲಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣದ ನಂತರ ನಡೆಯುವ ಪಥಸಂಚಲನ ಹಾಗೂ ಗೌರವ ವಂದನೆ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವ ಪಥಸಂಚಲನ ತಂಡಗಳು ಅಗತ್ಯ ತಾಲೀಮು ನಡೆಸಿ ಶಿಸ್ತುಬದ್ಧ ಪಥಸಂಚಲನ ನಡೆಸಬೇಕು. ಪಥಸಂಚಲನದಲ್ಲಿ ಭಾಗವಹಿಸುವ ಎಲ್ಲ ತಂಡಗಳಿಗೆ ಪೊಲೀಸ್ ಇಲಾಖೆಯಿಂದ ಶಿಸ್ತಿನ ತರಬೇತಿ ನೀಡಬೇಕು. ಶಾಲಾ-ಕಾಲೇಜು ಮಕ್ಕಳಿಗೆ ವಿಶೇಷ ಆಸಕ್ತಿ ವಹಿಸಿ ತರಬೇತಿ ನೀಡಬೇಕು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಯಾವುದೇ ಅನನುಕೂಲವಾಗದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮಗೆ ನಿಯೋಜಿಸಿದ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ. ಕಾರ್ಯಕ್ರಮದ ದಿನದಂದು ಭಾಗವಹಿಸುವ ಸಾರ್ವಜನಿಕರು, ಅತಿಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಆರೋಗ್ಯ ಇಲಾಖೆಯವರು ಥರ್ಮಲ್ ಸ್ಕಾö್ಯನಿಂಗ್, ಸ್ಯಾನಿಟೈಸರ್ ಒದಗಿಸುವುದರ ಜೊತೆಗೆ ತುರ್ತು ಸಂದರ್ಭಕ್ಕಾಗಿ ಅಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ನಗರಸಭೆಯಿಂದ ನಗರದ ಪ್ರಮುಖ ರಸ್ತೆ ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು. ನಿರ್ಮಿತಿ ಕೇಂದ್ರದಿAದ ಕ್ರೀಡಾಂಗಣದಲ್ಲಿ ಮೊಬೈಲ್ ಶೌಚಾಲಯಗಳನ್ನು ಒದಗಿಸಬೇಕು. ಕಾರ್ಯಕ್ರಮದ ವೇದಿಕೆಯಲ್ಲಿ ಹೂವಿನ ಅಲಂಕಾರವನ್ನು ತೋಟಗಾರಿಕೆ ಇಲಾಖೆಯಿಂದ ನಿರ್ವಹಿಸಬೇಕು ಎಂದು ಅವರು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್-19 ಕಾರಣದಿಂದ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಆದರೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮಾಜಿಕ ಸಂದೇಶವುಳ್ಳ ಕಿರು ನಾಟಕಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಬಹುದು. ಸಂವಿಧಾನ, ಕೋವಿಡ್-19 ಲಸಿಕೆ ಅಭಿಯಾನ, ಕೃಷಿ ಸಂಜೀವಿನಿ ವಾಹನಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಟಿಕ ಆಹಾರದ(ಮೊರಿಂಗಾ ಪೌಡರ್) ಕುರಿತು ಸ್ತಬ್ಧಚಿತ್ರಗಳನ್ನು ನಿರ್ಮಿಸಿ ಪ್ರದರ್ಶಿಸಬೇಕು. ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ, ಪ್ರವಾಸಿ ಟ್ಯಾಕ್ಸಿ ವಿತರಣೆ, ಪ್ರತಿಭಾವಂತ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆಯನ್ನು ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಎಲ್ಲಾ ಇಲಾಖೆಗಳನ್ನು ಒಳಗೊಂಡು ಸಮಿತಿಗಳನ್ನು ರಚಿಸಲಾಗಿದೆ. ಅದರಂತೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ತಮಗೆ ನಿಯೋಜಿಸಿದ ಕರ್ತವ್ಯವನ್ನು ಲೋಪವಿಲ್ಲದಂತೆ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಶರಣಬಸವರಾಜ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ತಹಶೀಲ್ದಾರ ಜೆ.ಬಿ.ಮಜ್ಜಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error