fbpx

ಗಣೇಶ ಆಚರಣೆ ವೇಳೆ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ-ಸುರಳ್ಕರ್ ವಿಕಾಸ ಕಿಶೋರ್


ಕೊಪ್ಪಳ, : ಕೋವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು 2020ರ ಆಗಸ್ಟ್ 22 ರಂದು ಗಣೇಶ ಉತ್ಸವವನ್ನು ಸರಳ ಮತ್ತು ಭಕ್ತಿಪೂರ್ವಕವಾಗಿ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ವಯ ಆಚರಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ -2005 ರ ರೀತ್ಯಾ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲೆಯ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ, ಕೊರೊನಾ ವೈರಸ್ ಹರಡುವಿಕೆ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ರ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಗಣೇಶೋತ್ಸವ ಆಚರಿಸುವ ಸಂಬAಧ  ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಆದೇಶಿಸಲಾಗಿದೆ.
ಮಾರ್ಗಸೂಚಿಗಳು;
ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದ ಒಳಗೆ, ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ ಅಥವಾ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊAದಿಗೆ ಆಚರಿಸಬೇಕು.  ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು.  ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು ಅಥವಾ ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನ್ಸಿಪಲ್ ಕಾರ್ಪೋರೇಷನ್/ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಒಂದು ವಾರ್ಡ್ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶ ಮೂರ್ತಿಯನ್ನು ಮಾತ್ರ ಪ್ರತಿಷ್ಠಾಪಿಸಬೇಕು.  ಗಣೇಶೋತ್ಸವಕ್ಕೆ ಸಂಬAಧಪಟ್ಟ ಪ್ರತಿಷ್ಠಾಪನಾ ಸಂಸ್ಥೆಗಳು 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು.  ಒಮ್ಮೆಲೆ 20 ಕ್ಕಿಂತ ಹೆಚ್ಚಿನ ಭಕ್ತಾದಿಗಳಿಗೆ ಸೇರದಂತೆ ಅನುವು ಮಾಡಬೇಕು. ಗಣೇಶ ಮೂರ್ತಿ ಪ್ರತಿಷ್ಠಾನ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.  ಈ ಕಾರ್ಯಕ್ರಮಗಳಿಗೆ ಅನುಮತಿ ನೀಡದಂತೆ ಸಂಬAಧಿಸಿದ ಪ್ರಾಧಿಕಾರಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯತಿ ಅಧಿಕಾರಿಗಳು ಪಾಲನೆ ಮಾಡುವಂತೆ ಆದೇಶಿಸಲಾಗಿದೆ.
ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹೊರಡಿಸಬಾರದು.  ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.  ಗಣೇಶ ಚತುರ್ಥಿ ಹಬ್ಬದ ಸಂಬAಧ ಯಾವುದೇ ಡಿಜೆ ಸೌಂಡ್ ಸಿಸ್ಟಂ ಬಳಸಲು ಅನುಮತಿ ಇರುವುದಿಲ್ಲ.  ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 & 270 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರ ಪ್ರಕಾರ ಕ್ರಮ ಜರುಗಿಸಲಾಗುವುದು.  ಪಾರಂಪರಿಕ ಗಣೇಶಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ ಅಥವಾ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾಗಿರುವ ಹೊಂಡ ಅಥವಾ ಮೊಬೈಲ್ ಟ್ಯಾಂಕಗಳಲ್ಲಿ ಅಥವಾ ಕೃತಕ ಟ್ಯಾಂಕರ್‌ಗಳಲ್ಲಿ ವಿಸರ್ಜಿಸುವುದು.  ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಬಾರದು.  ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಜಲ ಮೂಲಗಳ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45ಎ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕಿçÃನಿಂಗ್ ವ್ಯವಸ್ಥೆಯನ್ನು ಸಂಬAಧ ಪಟ್ಟ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಗಣೇಶೋತ್ಸವ ಪ್ರತಿಷ್ಠಾಪನಾ ಸಮಿತಿ ಅಥವಾ ಮಂಡಳಿಯ ಮುಖ್ಯಸ್ಥರು ಕಲ್ಪಿಸಬೇಕು. ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಸಂಬAಧ ಪಟ್ಟ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಗಣೇಶೋತ್ಸವ ಸಮಿತಿ, ಮಂಡಳಿಯ ಮುಖ್ಯಸ್ಥರು ಕೈಗೊಳ್ಳಬೇಕು.  ಭಕ್ತಾದಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು.
ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟಿçÃಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು.  ಅಲ್ಲದೇ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಮಾಲಿನ್ಯ ನಿಯಂತ್ರಣಾ ಮಂಡಳಿ, ಅಗ್ನಿಶಾಮಕ ಇಲಾಖೆ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಅಥವಾ ಹೊರಡಿಸಲಾಗುವ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು. ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸ್ಥಳೀಯ ಸಂಸ್ಥೆ, ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ ಅಥವಾ ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು. ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಪೊಲೀಸ್ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು.
ರಾಷ್ಟಿçÃಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ, ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು. ಹೊರ ರಾಜ್ಯದಿಂದ ಕರ್ನಾಟಕ ರಾಜ್ಯಕ್ಕೆ ತರುವ ಪಿ.ಓ.ಪಿ. ಮತ್ತು ರಾಸಾಯನಿಕ ವಿಗ್ರಹಗಳನ್ನು ತಡೆಯಲು ಮತ್ತು ವಾಪಸ್ಸು ಕಳುಹಿಸುವ ಜವಾಬ್ದಾರಿಯನ್ನು ಜಿಲ್ಲೆಯ ಗಡಿ ಚೆಕ್‌ಪೋಸ್ಟ್ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ.  ಈ ಸಂಬAಧ ರಾಜ್ಯದ ವಾಣಿಜ್ಯ ತೆರಿಗೆ, ಸಾರಿಗೆ, ಪೊಲೀಸ್, ಅರಣ್ಯ ಮತ್ತು ಗಣಿ ಇಲಾಖೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸರ್ಕಾರವು ನಿರ್ದೇಶಿಸಿದ್ದು, ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error
error: Content is protected !!