ಗವಿಮಠ ಕೋವಿಡ್-19 ಆಸ್ಪತ್ರೆಗೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ : ಪರಿಶೀಲನೆ


ಕೊಪ್ಪಳ, : ಶ್ರೀ ಗವಿಮಠ ಕೋವಿಡ್ ಆಸ್ಪತ್ರೆಗೆ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಅ. ಜೊಲ್ಲೆ ಅವರು ) ಭೇಟಿ ನೀಡಿ, ಪರಿಶೀಲಿಸಿದರು.

ಜಿಲ್ಲೆಯ ಕೊರೋನಾ ಸೋಂಕಿತರಿಗೆ ಚಿಕಿತ್ಸೆಗೆ ನೆರವಾಗಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ಗವಿಸಿದ್ಧೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಇವರ ಸಹಯೋಗದಲ್ಲಿ ಶ್ರೀ ಗವಿಮಠದ ಯಾತ್ರಿ ನಿವಾಸದಲ್ಲಿ ನಿರ್ಮಾಣಗೊಂಡ 100 ಆಕ್ಸಿಜನ್ ಬೆಡ್ಗಳ ಗವಿಮಠ ಕೋವಿಡ್ ಆಸ್ಪತ್ರೆಗೆ ಸಚಿವೆ ಶಶಿಕಲಾ ಅ. ಜೊಲ್ಲೆ ಅವರು ಸಚಿವರು ಗುರುವಾರ ವೀಕ್ಷಣೆ ಮಾಡಿ, ಕೋವಿಡ್-19 ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಗಂಗಾವತಿ ಶಾಸಕರ ಪರಣ್ಣ ಮುನವಳ್ಳಿ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಜಿಲ್ಲಾ ಕ್ಷಯ ನಿರ್ಮೂಲನಾ ಅಧಿಕಾರಿ ಡಾ.ಮಹೇಶ್ ಎಂ.ಜಿ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Please follow and like us:
error