‘ಗಾಂಧೀಜಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು’: ಗುಜರಾತ್ ನ 9ನೆ ತರಗತಿ ಪರೀಕ್ಷೆಯಲ್ಲಿ ಪ್ರಶ್ನೆ

ಅಹ್ಮದಾಬಾದ್,  : ‘ಮಹಾತ್ಮಾ ಗಾಂಧೀಜಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು’ ಎಂದು ಗುಜರಾತ್ ನ 9ನೆ ತರಗತಿಯ ಪರೀಕ್ಷೆಯಲ್ಲಿ ಪ್ರಶ್ನೆ ಕೇಳಲಾಗಿದ್ದು, ಭಾರೀ ವಿವಾದ ಸೃಷ್ಟಿಸಿದೆ. ಈ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳು ತನಿಖೆಗೆ ಆದೇಶಿಸಲಾಗಿದೆ ಎಂದಿದ್ದಾರೆ.

‘ಗಾಂಧೀಜಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು’ ಎಂದು 9ನೆ ತರಗತಿಯ ಪರೀಕ್ಷೆಯಲ್ಲಿ ಪ್ರಶ್ನೆಯೊಂದನ್ನು ಕೇಳಲಾಗಿತ್ತು. ‘ಸುಫಲಂ ಶಾಲಾ ವಿಕಾಸ್ ಸಂಕುಲ್’ಎನ್ನುವ ಬ್ಯಾನರ್ ನಡಿ ಈ ಶಾಲೆಯನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

” ಈ ಪ್ರಶ್ನೆ ತೀವ್ರ ಸಂಪೂರ್ಣ ಆಕ್ಷೇಪಾರ್ಹ. ಈ ಬಗ್ಗೆ ನಾವು ತನಿಖೆಗೆ ಆದೇಶಿಸಿದ್ದೇವೆ. ವರದಿ ಬಂದ ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು” ಎಂದು ಗಾಂಧಿನಗರದ ಜಿಲ್ಲಾ ಶಿಕ್ಷಣಾಧಿಕಾರಿ ಭಾರತ್ ವಾಧೇರ್ ಪ್ರತಿಕ್ರಿಯಿಸಿದ್ದಾರೆ.

Please follow and like us:
error