fbpx

ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ : ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ಧೇನು ಗೊತ್ತಾ?

ಸಿಬ್ಬಂದಿಗೆ ಪಾಜಿಟಿವ್ ಕಾರಣ ಮನೆಯಿಂದಲೇ ಕರ್ತವ್ಯ ನಿರ್ವಹಣೆ, ಆತಂಕಬೇಡ ಆರೋಗ್ಯವಾಗಿದ್ದೇನೆ-ಸಿಎಂ. ಬಿ.ಎಸ್ವೈ

ಬೆಂಗಳೂರು :  ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ, ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ ಎಂದು ಸಿ.ಎಂ.ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ

Please follow and like us:
error
error: Content is protected !!