ಗ್ರಾಮೀಣ ಅಂಚೆ ಸೇವಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿರುವ 2,443 ಗ್ರಾಮೀಣ ಅಂಚೆ ನೌಕರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಮತ್ತು ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಅನುಸೂಚಿತ ಜಾತಿ, ಬುಡಕಟ್ಟು, ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.  ಹಿಂದುಳಿದ ವರ್ಗಗಳ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಮುಖ್ಯ ಅಂಚೆ ಕಛೇರಿಯಲ್ಲಿ ಅಥವಾ ಆಯ್ದ ಅಂಚೆ ಕಛೇರಿಗಳ ಕೌಂಟರ್‌ನಲ್ಲಿ ಸಲ್ಲಿಸಬಹುದು. ಹಾಗೂ ವೆಬ್‌ಸೈಟ್  http://appost.in/gdsonline ನ ಹೋಮ್ ಪೇಜ್‌ನಲ್ಲಿ ಲಭ್ಯವಿರುವ ಯು.ಆರ್.ಎಲ್.ನ ಮೂಲಕ ಶುಲ್ಕವನ್ನು ಪಾವತಿಸಬಹುದಾಗಿದೆ.  ಮಹಿಳಾ ಅಭ್ಯರ್ಥಿಗಳಿಗೆ, ತೃತೀಯ ಲಿಂಗಿಗಳಿಗೆ ಮತ್ತು ಅನುಸೂಚಿತ ಜಾತಿ, ಬುಡಕಟ್ಟು ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.


ಆಸಕ್ತ ಅಭ್ಯರ್ಥಿಗಳು 2021ರ ಜನವರಿ. 20 ರೊಳಗೆ ತಮ್ಮ ಹೆಸರನ್ನು ವೆಬ್‌ಸೈಟ್ ಮೂಲಕ ನೋಂದಾಯಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಪೋಸ್ಟ್ ಮಾಸ್ಟರ್ ಜನರಲ್ ಬೆಂಗಳೂರು ಮುಖ್ಯ ಕಾರ್ಯಾಲಯದ ದೂರವಾಣಿ ಸಂಖ್ಯೆ 080-22392599, ಪೋಸ್ಟ್ ಮಾಸ್ಟರ್ ಜನರಲ್ ದಕ್ಷಿಣ ಕರ್ನಾಟಕ ವಲಯದ ದೂರವಾಣಿ ಸಂಖ್ಯೆ 9481455606, ಪೋಸ್ಟ್ ಮಾಸ್ಟರ್ ಜನರಲ್ ಉತ್ತರ ಕರ್ನಾಟಕ ವಲಯದ ದೂರವಾಣಿ ಸಂಖ್ಯೆ 0836-2740454, ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕರ್ನಾಟಕ ವೃತದ 080-22392544 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಗದಗ ವಿಭಾಗದ ಅಂಚೆ ಅಧೀಕ್ಷಕರು   ತಿಳಿಸಿದ್ದಾರೆ.

Please follow and like us:
error