ಗ್ರಾ.ಪಂ. ಚುನಾವಣಾ ಅಭ್ಯರ್ಥಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

 : ವಿಕಾಸ್ ಕಿಶೋರ್ ಸುರಳ್ಕರ್
ಕೊಪ್ಪಳ, :  ಗ್ರಾಮ ಪಂಚಾಯತ ಚುನಾವಣೆಗೆ ಡಿ.07 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಸಲು ಬರುವ ಅಭ್ಯರ್ಥಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತಿ ಚುನಾವಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಹೆಚ್ಚಾಗಿ ಪಾಲ್ಗೊಳ್ಳುತ್ತಾರೆ. ಅಲ್ಲದೆ ಅಭ್ಯರ್ಥಿಗಳು ನೇರವಾಗಿ ಮತದಾರರ ಬಳಿ ತೆರಳಿ ಮತಯಾಚನೆ ಮಾಡುವುದರಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಅಭ್ಯರ್ಥಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹತ್ತಿರದ ಮಾದರಿ ಸಂಗ್ರಹ ಕೇಂದ್ರಗಳಿಗೆ ತೆರಳಿ ಗಂಟಲು ದ್ರವದ ಮಾದರಿ ನೀಡುವಂತೆ ಚುನಾವಣಾ ರಿಟರ್ನಿಂಗ್ ಅಧಿಕಾರಿಗಳು ಅಭ್ಯರ್ಥಿಗಳಿಗೆ ಸೂಚನೆ ನೀಡಬೇಕು. ಹಾಗೂ ಕೋವಿಡ್ ಪರೀಕ್ಷೆಗೆ ಅಭ್ಯರ್ಥಿಗಳು ಮಾದರಿಯನ್ನು ನೀಡಿದ ಬಗ್ಗೆ ದೃಢೀಕೃತ ವರದಿಯನ್ನು ಸಲ್ಲಿಸಬೇಕು. ಈ ಬಗ್ಗೆ ತಹಶೀಲ್ದಾರರು, ತಾಲ್ಲೂಕು ಆರೋಗ್ಯಾಧಿಕಾರಿಗಳು ಮತ್ತು ಪ.ಪಂ.ಮುಖ್ಯಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಗ್ರಾಮ ಪಂಚಾಯತ ಚುನಾವಣೆಗೆ ಈಗಾಗಲೇ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅವುಗಳನ್ನು ಬದಲಿಸಲು ಸಾಧ್ಯವಿಲ್ಲವಾದ್ದರಿಂದ ಮತಗಟ್ಟೆಗಳಲ್ಲಿ ಅಗತ್ಯವಿರುವ ದುರಸ್ಥಿ ಕಾರ್ಯಗಳು, ಮೂಲಭೂತ ಸೌಕರ್ಯಗಳನ್ನು ಒದಗಿಸಲು, ವ್ಯವಸ್ಥಿತ ಚುನಾವಣೆ ನಡೆಸಲು ಬೇಕಾದ ಅಗತ್ಯ ಕ್ರಮಗಳನ್ನು ತಾಲ್ಲೂಕುವಾರು ನೇಮಿಸಲಾದ ಚುನಾವಣಾ ನೋಡಲ್ ಅಧಿಕಾರಿಗಳು ಕೈಗೊಳ್ಳಬೇಕು. ಶಾಲೆಗಳ ಸ್ವಚ್ಛತೆ ಕುರಿತು ಸಂಬAಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮಕೈಗೊಂಡು ಸಂಬAಧಿಸಿದ ಶಾಲಾ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ಹೇಳಿದರು.
ಮತಪತ್ರಗಳ ಮುದ್ರಣ, ಮುದ್ರಕರು, ಪರಿಶೀಲನೆ ಬಗ್ಗೆ ಆರ್‌ಓ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮತಪತ್ರಗಳಲ್ಲಿ ಯಾವುದೇ ಲೋಪದೋಷಗಳಿರದಂತೆ ಎಚ್ಚರ ವಹಿಸಬೇಕು. 2020ರ ನವೆಂಬರ್.26 ರಂದು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರನ್ವಯ ಗ್ರಾಮ ಪಂಚಾಯತ ಚುನಾವಣೆಯ ಮತಗಟ್ಟೆಗಳಲ್ಲಿ ಮತದಾರರ ಪಟ್ಟಿಯನ್ನು ನೀಡಲಾಗುತ್ತದೆ. ಆದ್ದರಿಂದ ಮತಗಟ್ಟೆ ಅಧಿಕಾರಿಗಳು ಯಾವುದೇ ಗೊಂದಲಕ್ಕೆ ಆಸ್ಪದ ಕೊಡದಂತೆ ಅಂತಿಮ ಮತದಾರರ ಪಟ್ಟಿಯನ್ವಯ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡುಬAದಿರುವುದು ಸಮಾಧಾನಕರ ಸಂಗತಿಯಾಗಿದೆ. ಹಾಗೆಂದು ಆರೋಗ್ಯಾಧಿಕಾರಿಗಳು ಮಾದರಿ ಸಂಗ್ರಹದ ಪ್ರಮಾಣದಲ್ಲಿ ಇಳಿಕೆ ಮಾಡುವಂತಿಲ್ಲ. ದಿನಕ್ಕೆ ಕನಿಷ್ಠ 1400 ಮಾದರಿಗಳನ್ನು ಸಂಗ್ರಹಿಸಬೇಕು. ಎಲ್ಲ ಮಾದರಿಗಳನ್ನು ಆರ್‌ಟಿಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಬೇಕು. ಚುನಾವಣಾ ಸಂದರ್ಭದಲ್ಲಿ ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಸೋಂಕು ಹರಡುವಿಕೆ ಸಾಧ್ಯತೆ ಇರುವುದರಿಂದ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವಿಕೆ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು. ತಾಲ್ಲೂಕುವಾರು ಮೊಬೈಲ್ ಟೀಂಗಳ ಮೂಲಕ ಹೆಚ್ಚು ಹೆಚ್ಚು ಮಾದರಿ ಸಂಗ್ರಹಕ್ಕೆ ಅಗತ್ಯ ಪ್ರಮಾಣದ ಪ್ರಯೋಗಾಲಯ ತಂತ್ರಜ್ಞರನ್ನು ನೇಮಕ ಮಾಡಲು ಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಬೆಳೆ ಸಮೀಕ್ಷೆಯ ಕುರಿತ ಮಾಹಿತಿಯನ್ನು ತಂತ್ರಾAಶಕ್ಕೆ ಎಂಟ್ರಿ ಮಾಡಲು ಇಂದೇ ಕೊನೆಯ ದಿನವಾಗಿದ್ದು, ಸಂಬAಧಿಸಿದ ಕೃಷಿ ಇಲಾಖೆ ಅಧಿಕಾರಿಗಳು ಇನ್ನೂ ಮಾಹಿತಿ ಎಂಟ್ರಿ ಮಾಡದ ಸಿಬ್ಬಂದಿಗೆ ಸೂಚನೆ ನೀಡಿ ಸಂಜೆ 05 ಗಂಟೆಯೊಳಗೆ ಮಾಹಿತಿ ಎಂಟ್ರಿ ಮಾಡುವಂತೆ ಸೂಚಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಷಿಜನ್ ಪೂರೈಕೆಗೆ ಪೈಪ್‌ಲೈನ್ ವ್ಯವಸ್ಥೆ ಕಲ್ಪಿಸಲು ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ಪೂರೈಕೆ ಮಾಡಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರ, ಕೆಆರ್‌ಐಡಿಎಲ್ ನಿಂದ ಬಾಕಿ ಉಳಿದಿರುವ ಕಾಮಗಾರಿಗಳ ಬಗ್ಗೆ, ಆರ್ಥಿಕ, ಭೌತಿಕ ಪ್ರಗತಿ ವರದಿಯನ್ನು ಸಲ್ಲಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕಳೆದ ಕೆ.ಡಿ.ಪಿ ಸಭೆಯಲ್ಲಿ ಸರ್ವೇ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಅಬಕಾರಿ ಇಲಾಖೆ, ಕೆ.ಆರ್.ಐ.ಡಿ.ಎಲ್ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯನಿರ್ವಹಣೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ನಿರ್ದೇಶನಗಳನ್ವಯ ತೆಗೆದುಕೊಂಡ ಕ್ರಮಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಸಭೆಯ ನಡಾವಳಿವರೆಗೂ ಕಾಯದೆ, ಕೂಡಲೇ ವರದಿ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, 18 ವರ್ಷ ಪೂರ್ಣಗೊಂಡ ಮೆಟ್ರಿಕ್ ನಂತರದ ವಸತಿ ಶಾಲೆಗಳ ವಿದ್ಯಾರ್ಥಿಗಳು, ಪದವಿ ಪೂರ್ವ ಮತ್ತು 10 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಮತ್ತು ಪದವಿ ವಿದ್ಯಾರ್ಥಿಗಳಿಂದ, ಜಿಲ್ಲೆಯ ವಿವಿಧ ಇಲಾಖೆಗಳ ಸಿಬ್ಬಂದಿ, ಕಾರ್ಮಿಕಮ ಇಲಾಖೆಯಲ್ಲಿನ ನೋಂದಾಯಿತ ಕಾರ್ಮಿಕರು, ಸಾರಿಗೆ ಇಲಾಖೆಯ ವಿವಿಧ ಹಂತದ ಸಿಬ್ಬಂದಿ, ನಗರ ಸ್ಥಳೀಯ ಸಂಸ್ಥೆಗಳ ಪೌರ ಕಾರ್ಮಿಕರು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಮತದಾರರ ಗುರುತಿನ ಚೀಟಿಯ ಸಂಖ್ಯೆಯನ್ನು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಪಡೆಯಬೇಕು. ಇದರಿಂದ ಇನ್ನೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡದೆ ಇರುವವರ ಮಾಹಿತಿ ಪಡೆಯಲು ಸಾಧ್ಯವಾಗುತ್ತದೆ. ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅನುಕೂಲವಾಗುತ್ತದೆ. ಆದ್ದರಿಂದ ಅಧಿಕಾರಿಗಳು ಅಗತ್ಯ ಮಾಹಿತಿ ಸಂಗ್ರಹಿಸಿ ಹೆಸರು ಸೇರ್ಪಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಶರಣಬಸವರಾಜ, ಪ್ರಬೇಷನರಿ ಐ.ಎ.ಎಸ್ ಅಧಿಕಾರಿ ವರ್ಣಿತ್ ನೇಗಿ, ಜಂಟಿ ಕೃಷಿ ನಿರ್ದೇಶಕ ಶಿವಕುಮಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಜಿಲ್ಲೆಯ ಎಲ್ಲಾ ತಾಲ್ಲ್ಲೂಕುಗಳ ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error