ಗ್ರಾ.ಪಂ. ಸದಸ್ಯರು ಯಾವುದೇ ಆಸೆ ಆಮೀಷಗಳಿಗೆ ಬಲಿಯಾಗಬೇಡಿ- ಕರಡಿ ಸಂಗಣ್ಣ


ಕೊಪ್ಪಳ : ಹೊಸದಾಗಿ ಆಯ್ಕೆ ಯಾಗಿರುವ ಸದಸ್ಯರು ಯಾವುದೇ ಆಸೆ ಆಮೀಷಗಳಿಗೆ ಬಲಿಯಾಗದೇ ಕೆಲಸ ಮಾಡಬೇಕು ಎಂದು ಸಂಸದ ಕರಡಿ ಸಂಗಣ್ಣ ಹೇಳಿದರು

ನಗರದ ಎಂಪಿ ಪ್ಯಾಲೇಸ್ ನಲ್ಲಿ ನಡೆದ ನೂತನ ಗ್ರಾಮ ಪಂಚಾಯತ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

. ಮನೆಗಳು ಸೇರಿದಂತೆ ಸರಕಾರದಿಂದ ಬರುವ ಯೋಜನೆಗಳನ್ನು ಬಡಜನರಿಗೆ ಮುಟ್ಟಿಸುವ ಕೆಲಸ ಮಾಡಿದರೆ ಅದಕ್ಕಿಂತ ಪುಣ್ಯದ ಕೆಲಸ ಬೇರೊಂದಿಲ್ಲ. ನಮಗೊಂದು ಸದಾವಕಾಶ ಸಿಎಂ ಯಡಿಯೂರಪ್ಪ ನವರು ಸೇರಿದಂತೆ ಇತರರು ಆಗಮಿಸಲಿದ್ದಾರೆ. ಆತ್ಮನಿರ್ಭರ ಯೋಜನೆಯಡಿಯಲ್ಲಿ ೨೫ ಸಾವಿರ ಜನರಿಗೆ ಉದ್ಯೋಗವಕಾಶ ಸಿಗಲಿದೆ. ಕೊಪ್ಪಳದ ಏತನೀರಾವರಿ ಸಿಂಗಟಾಲೂರ ಏತನೀರಾವರಿ ಕುಂಠಿತವಾಗಿದೆ. ಕ್ಷೇತ್ರದ ಅಭಿವೃದ್ದುಗೆ ಸಂಬಂದಿಸಿದಂತೆ ನಮಗೆ ಸಾಕಷ್ಟು ಯೋಜನೆಗಳು, ಕನಸುಗಳಿವೆ. ಭ್ರಷ್ಟಾಚಾರ ಮಾಡಿದರೆ ಮುಂದೋಂದು ದಿನ ಅದು ಶಾಪವಾಗಿ ಕಾಡುತ್ತೆ. ಜನತಾ ಮನೆಗಳ ಕಾನ್ಸೆಪ್ಟ ನ್ನು ನಿಮ್ಮೆಲ್ಲರ ಪರವಾಗಿ ಮಾಡುತ್ತೇವೆ. ೮ ಸಾವಿರಕ್ಕೂ ಹೆಚ್ಚು ಮನೆಗಳ ನೆನಗುದಿಗೆ ಬಿದ್ದಿವೆ. ಇವತ್ತು ನಾವು ಇರಬಹುದು ನಾಳೆ ಇರಲಿಕ್ಕಿಲ್ಲ ಆದರೆ ಅಭಿವೃದ್ಧಿ ಕೆಲಸಗಳು ಉಳಿಯುತ್ತಿವೆ. ಹಣದ ಆಮೀಷ ನೀಡಲಾಗುತ್ತೆ. ಹಣ ಮುಖ್ಯವಲ್ಲ ಮುಂದಿನ ಅವಧಿಗೂ ಆಯ್ಕೆಯಾಗುವಂತೆ ಕೆಲಸ ಮಾಡಿದರೆ ಗ್ರಾಮ ಅಭಿವೃದ್ದಿಯಾಗುತ್ತೆ. ಎಲ್ಲರೂ ನಾಯಕತ್ವ ಗುಣವನ್ನು ರೂಡಿಸಿಕೊಳ್ಳಬೇಕು ಕೊಪ್ಪಳ ತಾಲೂಕನ್ನು ಮಾದರಿ ತಾಲೂಕನ್ನಾಗಿ ಮಾಡುವ ಪ್ರತಿಜ್ಞೆ ಮಾಡೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನವೀನ್ ಗುಳಗಣ್ಣವರ, ಅಮರೇಶ ಕರಡಿ, ಈಶಣ್ಣ ಮಾದಿನೂರ, ಲಕ್ಷ್ಮೀ ಕಂದಾರಿ, ಪ್ರದೀಪ ಹಿಟ್ನಾಳ, ಸಿದ್ದೇಶ್ ಬಸವರಾಜ್ ಭೋವಿ, ಕರಿಯಪ್ಪ ಮೇಟಿ ಸೇರಿದಂತೆ ಇತರರು ಮಾತನಾಡಿದರು.
ಕೊಪ್ಪಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗೆದ್ದಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭಾಗವಹಿಸಿದ್ದರು. ನಗರಾಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಮಹಾಂತೇಶ ಮಾಲಿಪಾಟೀಲ್ ಪ್ರಾಸ್ತಾವಿಕ ನುಡಿಗಳನ್ನಾಡಿದರೆ, ಗಣೇಶ ಹೊರತಟ್ನಾಳ ಕಾರ್ಯಕ್ರಮ ನೆರವೇರಿಸಿದರು.

Please follow and like us:
error