fbpx

ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ‘ಕಠಿಣ ಕ್ರಮ’ ಕೈಗೊಳ್ಳಬಾರದೇಕೆ? ಸರ್ಕಾರ ಯಾರಿಗೆ ಮತ್ತು ಯಾಕೆ ಹೆದರುತ್ತಿದೆ?  -ಸಿದ್ದರಾಮಯ್ಯ

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಎಂದು ದಿನಕ್ಕೆರಡು ಬಾರಿ

@CMofKarnataka  ಮತ್ತು ಸಚಿವರು ಅಬ್ಬರಿಸುತ್ತಿದ್ದಾರೆ. ಸ್ಯಾಂಪಲ್‌ಗಾಗಿ ಒಂದೆರಡು ಆಸ್ಪತ್ರೆಗಳ ವಿರುದ್ಧ ‘ಕಠಿಣ ಕ್ರಮ’ ಕೈಗೊಳ್ಳಬಾರದೇಕೆ? ಸರ್ಕಾರ ಯಾರಿಗೆ ಮತ್ತು ಯಾಕೆ ಹೆದರುತ್ತಿದೆ?  – ಎಂದು ಸರಕಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ

ಈ ಕುರಿತು ಟ್ವೀಟ್ ಮಾಡಿರುವ ಅವರು

ಕೊರೊನಾ ನಿಯಂತ್ರಣಕ್ಕೆ ಇರುವ ಏಕೈಕ ಮಾರ್ಗ ಎಂದರೆ ಸೋಂಕು ಪರೀಕ್ಷೆ ಎನ್ನುವುದನ್ನು ವಿಶ್ವದಾದ್ಯಂತ ವೈದ್ಯರು-ತಜ್ಞರು ಹೇಳುತ್ತಲೇ ಇದ್ದಾರೆ. ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆಯನ್ನು ಸರಿಯಾಗಿ ನಡೆಸಬೇಕೆಂದು ಮಾತ್ರ ಗೊತ್ತಾಗಿಲ್ಲ.

ರಾಜ್ಯದಲ್ಲಿ #covid ಪರೀಕ್ಷಾ ಕೇಂದ್ರಗಳಿರುವುದು ಕೇವಲ 59. ಅವುಗಳ ದಿನದ ಪರೀಕ್ಷಾ ಸಾಮರ್ಥ್ಯ 31,116. ಈಗ ಪ್ರತಿದಿನ ನಡೆಯುತ್ತಿರುವುದು ಕೇವಲ 13, 910 ಪರೀಕ್ಷೆ ಮಾತ್ರ. ಅಂದರೆ‌ ಒಟ್ಟು ಸಾಮರ್ಥ್ಯದ ಶೇಕಡಾ 44.7 ರಷ್ಟು ಮಾತ್ರ ಬಳಕೆ. ರಾಜ್ಯ ಸರ್ಕಾರದ ಅಯೋಗ್ಯತೆಗೆ ಬೇರೆ ಸಾಕ್ಷಿ ಬೇಕೇ?

ಕೊರೊನಾ ಸೋಂಕುಪರೀಕ್ಷೆ ಹೆಚ್ಚು ನಡೆಸಿದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ಆಗ‌ ಅದೇ ಪ್ರಮಾಣದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ  @CMofKarnataka ಸೋಂಕುಪರೀಕ್ಷೆ ಹೆಚ್ಚು ನಡೆಸುತ್ತಿಲ್ಲ. ಜನರ ಸಾವಿಗೆ ಕಾರಣವಾದ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದು ಕರೆದರೆ ತಪ್ಪಾದೀತೇ? ಎಂದು ರಾಜ್ಯ ಸರಕಾರದ ವಿರುದ್ದ ಹರಿಹಾಯ್ದಿದ್ದಾರೆ

 

Please follow and like us:
error
error: Content is protected !!