ಚಿತ್ರದುರ್ಗದ ಪತ್ರಕರ್ತನ ಕುಟುಂಬಕ್ಕೆ ಸಿಎಂ ನೆರವು

Kannadanet NEWS :  .

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂ

ಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ರಾಜ್ ಟಿವಿ ಕ್ಯಾಮರಾಮೆನ್ ವಿನಾಯಕ ಅವರ ಕುಟುಂಬಕ್ಕೆ
2 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.

ಸಂಕಷ್ಟದಲ್ಲಿರುವ ವಿನಾಯಕ ಅವರ ಕುಟುಂಬಕ್ಕೆ ನೆರವು ನೀಡುವಂತೆ ಇತ್ತೀಚೆಗೆ ಚಿತ್ರದುರ್ಗಕ್ಕೆ ಭೇಟಿನೀಡಿದ್ದಾಗ ಅಲ್ಲಿನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು, ರಾಜ್ಯ ಸಂಘಕ್ಕೆ ಮನವಿ ಮಾಡಿತ್ತು.

ಸಂಕಷ್ಟದಲ್ಲಿದ್ದ ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಕೃತಜ್ಞತೆ ಸಲ್ಲಿಸಿದ್ದಾರೆ

Please follow and like us:
error