ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ಅಮಾನತು

ಕೊಪ್ಪಳ ಏ. 08 : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ನಿಯೋಜಿಸಲಾದ ಅಧಿಕಾರಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಕಾರಣ ಕುಷ್ಟಗಿ ತಾಲ್ಲೂಕಿನ ಹನಮನಾಳ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಎಂ.ಎಸ್.ವಾಲಿ ಇವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ಆದೇಶಿಸಿದ್ದಾರೆ.
ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ನೀತಿ ಸಂಹಿತೆ ಉಲ್ಲಂಘಿಸುವ ಪ್ರಕರಣಗಳ ಪತ್ತೆ ಹಚ್ಚುವ ಸಲುವಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಆರು ಫ್ಲೈಯಿಂಗ್ ಸ್ಕ್ವಾಡ ತಂಡಗಳನ್ನು ರಚಿಸಲಾಗಿದೆ. ಇಲ್ಲಿಗೆ ಪ್ಲೆಯಿಂಗ್ ಸ್ಕ್ವಾಡ್ ಆಗಿ ಗಂಗಾವತಿ ಗ್ರಾಮೀಣ ಭಾಗಕ್ಕೆ ನಿಯೋಜಿಸಲಾಗಿತ್ತು. ಅನೇಕ ಭಾರಿ ಮೊಬೈಲ್ ಕರೆ ಮಾಡಿ ತಿಳಿಸಿದ್ದಾಗ್ಯೂ ಸಹ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯತೆ ತೋರಿಸಿದ್ದರಿಂದ ಅಮಾನತು ಮಾಡಿ ಆದೇಶಿಸಲಾಗಿದೆ.
=

Please follow and like us:
error