ಚುನಾವಣೆ ಮುಗಿಯುವವರೆಗೆ ‘ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆಗೆ ನಿಷೇಧ: ಚು. ಆಯೋಗ

ಹೊಸದಿಲ್ಲಿ, ಎ.10: ದೇಶದಲ್ಲಿ ಲೋಕಸಭಾ ಚುನಾವಣೆ ಮುಗಿಯುವವರೆಗೆ ‘ಪಿಎಂ ನರೇಂದ್ರ ಮೋದಿ’ ಚಿತ್ರದ ಬಿಡುಗಡೆಗೆ ಚುನಾವಣಾ ಆಯೋಗ ನಿಷೇಧ ಹೇರಿದೆ. ಚಿತ್ರವು ನಿನ್ನೆ ಬಿಡುಗಡೆಯಾಗುವುದೆಂದು ನಿರೀಕ್ಷಿಸಲಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿ ಯಾವುದೇ ದೂರುಗಳನ್ನು ನಿವೃತ್ತ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಾಧೀಶರು ಪರಿಶೀಲಿಸಲಿದ್ದಾರೆ ಎಂದು ಆಯೋಗ ತಿಳಿಸಿದೆ.

ಚಿತ್ರಕ್ಕೆ ತಡೆ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

Please follow and like us:
error