ಜಂತುಹುಳು ರಹಿತ ಜಿಲ್ಲೆಯನ್ನಾಗಿಸಲು ಕ್ರಮ ವಹಿಸಿ : ರಘುನಂದನ್‌ಮೂರ್ತಿ


ಕೊಪ್ಪಳ  : ಜಿಲ್ಲೆಯಲ್ಲಿ ಕೆಲವು ಮಕ್ಕಳು ರಕ್ತಹೀನತೆ, ಅಪೌಷ್ಟಿಕತೆಯಿಂದ ಬಳಲುತಿದ್ದು ಅವರನ್ನು ಗುರುತಿಸಿ ಮಕ್ಕಳಿಗೆ ಉತ್ತಮ ಪೌಷ್ಠಿಕ ಆಹಾರ ಸೇವಿಸುವಂತೆ ಅರಿವು ಮೂಡಿಸಬೇಕು. ಈ ಮೂಲಕ ಜಂತುಹುಳು ರಹಿತ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೆಪ್ಟೆಂಬರ್. 07 ರಂದು 2020-21ನೇ ಸಾಲಿನ ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಸೋಮವಾರದಂದು (ಆಗಸ್ಟ್.31) ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿಕಾರಿಗಳು ತಾವು ತಯಾರಿಸಿಕೊಂಡ ಕ್ರಿಯಾಯೋಜನೆ ಪ್ರಕಾರ ಜಿಲ್ಲೆಯ 01-19 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕೊರೊನಾ ಹರಡದಂತೆ ಮುಂಜಾಗ್ರತೆ ವಹಿಸಿ, ಮಕ್ಕಳಿಗೆ ಮಾತ್ರೆ ನೀಡಬೇಕು ಹಾಗೂ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು ಟಿ. ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷ ಪ್ರತಿ 06 ತಿಂಗಳಿಗೊಮ್ಮೆ ನಡೆಯುವ ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಸೆ.7 ರಿಂದ ಸೆ.21 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಮಕ್ಕಳಲ್ಲಿ ಕಂಡುಬರುವ ರಕ್ತಹೀನತೆ, ಅಪೌಷ್ಟಿಕತೆ, ಹಸಿವು ಆಗದೇ ಇರುವುದು, ನಿಶ್ಯಕ್ತಿ, ಹೊಟ್ಟೆನೋವು, ವಾಂತಿ, ಅತಿಸಾರ ಭೇದಿ, ತೂಕ ಕಡಿಮೆಯಾಗುವುದು ಇವು ಜಂತು ಬಾಧೆಯ ಲಕ್ಷಣಗಳಾಗಿದ್ದು ಇವುಗಳನ್ನು ತಡೆಗಟ್ಟಲು ಜಿಲ್ಲೆಯಲ್ಲಿ 5,58,087 ಮಕ್ಕಳ (01-19 ವರ್ಷದೊಳಗಿನ) ಗುರಿ ಹೊಂದಿದ್ದು, ಕೊರೊನಾ ಹರಡುತ್ತಿರುವ ಈ ಸಂದರ್ಭದಲ್ಲಿ ಕೂಡ ಎಲ್ಲಾ ಮಕ್ಕಳಿಗೆ ಆಶಾಕಾರ್ಯಕರ್ತೆ/ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಪೋಷಕರ ಎದುರಿನಲ್ಲಿ ಅಲ್‌ಬೆಂಡಜೊಲ್ ಮಾತ್ರೆಯನ್ನು ನೀಡಬೇಕಾಗಿದೆ. ಆ ಮಾತ್ರೆಯನ್ನು ಮಕ್ಕಳು ಅಗಿದು ತಿನ್ನಬೇಕು. ಇದರಿಂದ ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಸದೃಢರಾಗುತ್ತಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಯ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿದ್ದು ಈಗಾಗಲೇ ಈ ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಮಹೇಶ ಎಂ.ಜಿ., ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಇರ್ಫಾನಾ ಅಂಜುಮ್, ಜಿಲ್ಲಾ ರೋಗವಾಹಕ ಅಶ್ರಿತ ರೋಗ ನಿಯಂತ್ರಣಾಧಿಕಾರಿ ಡಾ. ವೆಂಕಟೇಶ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಸೇರಿದಂತೆ ತಾಲೂಕಾ ಆರೋಗ್ಯ ಅಧಿಕಾರಿ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕಾ ಮಟ್ಟದ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Please follow and like us:
error