ಜನವರಿ. 08 ರಿಂದ ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಪರೀಕ್ಷೆಗಳು

ಕನ್ನಡ ಸಾಹಿತ್ಯ ಪರಿಷತ್ತಿನ 2020-21ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು 2021ರ ಜನವರಿ. 08, 09 ಮತ್ತು 10 ರಂದು ಒಟ್ಟು ಮೂರು ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಕೆ.ರಾಜಕುಮಾರ್ ತಿಳಿಸಿದ್ದಾರೆ.
ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಬೆಂಗಳೂರಿನ ಪರೀಕ್ಷಾ ಅಭ್ಯರ್ಥಿಗಳಿಗೆ 2020ರ ಡಿಸೆಂಬರ್. 30ರ ನಂತರವೂ ಪ್ರವೇಶ ಪತ್ರ ತಲುಪದಿದ್ದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯದರ್ಶಿಗಳ ಬಳಿ ವಿಚಾರಿಸಬಹುದು. ಇತರೆ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ತಲುಪದಿದ್ದಲ್ಲಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪ್ರೆವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ  www.kasapa.in ಮೂಲಕ ಪಡೆಯಬಹುದು.  ಪರೀಕ್ಷಾ ವಿಳಾಸ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-26623584 ಕ್ಕೆ ಸಂಪರ್ಕಿಸಬಹುದಾಗಿ ದೆ.

Please follow and like us:
error