ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ


ಕೊಪ್ಪಳ,  : ರಾಷ್ಟ್ರೀಯ  ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು (ನ.19) “ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ” ಸ್ವೀಕರಿಸಲಾಯಿತು.
ನ. 19 ರಿಂದ 25 ರವರೆಗೆ “ ರಾಷ್ಟ್ರೀಯ ಐಕ್ಯತಾ ಸಪ್ತಾಹ”ವನ್ನು ಆಚರಿಸುವಂತೆ ಸರ್ಕಾರವು ನಿರ್ಧರಿಸಿದ್ದು, ಅದರಂತೆ ರಾಷ್ಟçದ ಸ್ವಾತಂತ್ರö್ಯ ಹಾಗೂ ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವುದಕ್ಕಾಗಿ ಈ ಸಪ್ತಾಹವನ್ನು ಹಮ್ಮಿಕೊಂಡು ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕರಿಸುವಂತೆ ಸರ್ಕಾರದ ನಿರ್ದೇಶನದಂತೆ ಗುರುವಾರದಂದು “ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ” ಸ್ವೀಕರಿಸಲಾಯಿತು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಪ್ರಮಾಣ ವಚನ ಬೋಧಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error