ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ


ಕೊಪ್ಪಳ,  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕಾನೂನು ಮಹಾವಿದ್ಯಾಲಯ, ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ಇಂದು (ನ.26) ಸಂವಿಧಾನ ದಿನದ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು, ತ್ವರಿತಗತಿ ವಿಶೇಷ ನ್ಯಾಯಾಲಯ-1 (ಪೊಕ್ಸೋ ನ್ಯಾಯಾಲಯ) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಅಧ್ಯಕ್ಷರಾದ ಎಸ್.ಎಂ.ಜಾಲವಾದಿ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಮತ್ತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಇತರ ಸಂಸ್ಥಾಪಕ ಪಿತಾಮಹರ ಅಮೂಲ್ಯ ಕೊಡುಗೆಗೆ ಗೌರವ ಸಲ್ಲಿಸಲು ಪ್ರತಿ ವರ್ಷ ನವೆಂಬರ್.26 ರಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ ದೇಶವು ಸಂವಿಧಾನವನ್ನು ಅಂಗೀಕರಿಸಿದ 70ನೇ ವರ್ಷಾಚರಣೆಯನ್ನು ಅಚರಿಸಲಾಗುತ್ತಿದೆ ಎಂದ ಅವರು, ಸಂವಿಧಾನ ದಿನಾಚರಣೆ ಪ್ರಮಾಣ ವಚನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಟಿ.ಶ್ರೀನಿವಾಸ ಅವರು ಮಾತನಾಡಿ, ಡಿಸೆಂಬರ್.19 ರಂದು ಇರುವ ಮೆಗಾ ಲೋಕ್ ಅದಾಲತ್ ಬಗ್ಗೆ ವಕೀಲರು ಸಹಕರಿಸಬೇಕು ಮತ್ತು ಯಶಸ್ವಿಗೊಳಿಸಬೇಕು ಎಂದು ತಿಳಿಸುತ್ತಾ ಸಂವಿಧಾನ ದಿನಾಚರಣೆ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಹಿರಿಯ ವಕೀಲರಾದ ಎ.ವಿ. ಕಣವಿ ಅವರು ಮಾತನಾಡಿ ಸಂವಿಧಾನದ ಪೂರ್ವಭಾವಿ ತತ್ವಗಳು ಹಾಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಹೆಚ್.ಮುರಡಿ ಅಧ್ಯಕ್ಷೀಯ
ನುಡಿಗಳನ್ನು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಕುಮಾರ ಎಸ್, ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ಮನುಶರ್ಮಾ, ಕರ್ನಾಟಕ ರಾಜ್ಯ ವಕೀಲರ ಪರಿಷತ್, ಬೆಂಗಳೂರಿನ ಸದಸ್ಯರಾದ ಆಸೀಫ್ ಅಲಿ, ಜಿಲ್ಲಾ ಸರ್ಕಾರಿ ಅಭಿಯೋಜಕರಾದ ಅಪರ್ಣಾ ಬಂಡಿ, öಜಿಲ್ಲಾ ಸರ್ಕಾರಿ ವಕೀಲರಾದ ರಾಜಶೇಖರ್ ವಿ. ಗಣವಾರಿ, ಅಪರ ಜಿಲ್ಲಾ ಸರ್ಕಾರಿ ವಕೀಲರಾದ ಎಸ್.ಎಂ. ಮೆಣಸಿನಕಾಯಿ, ಕೊಪ್ಪಳ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಬಿ.ವಿ. ಸಜ್ಜನ್ ಹಾಗೂ ನ್ಯಾಯಾಲಯದ ಎಲ್ಲ ಸಿಬ್ಬಂದಿ ವರ್ಗದವರು ಮತ್ತು ವಕೀಲರ ಸಂಘದ ವಕೀಲರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error