ಜಿಲ್ಲೆಯಲ್ಲಿ ಮಾಸ್ಕ್ ಕಡ್ಡಾಯ, ತಪ್ಪಿದಲ್ಲಿ ದಂಡ ವಿಧಿಸಿ : ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ: ಜಿಲ್ಲೆಯಲ್ಲಿ ನಾಳೆಯಿಂದ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಧರಿಸದವರಿಗೆ ದಂಡ ವಿಧಿಸಿ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಿ, ತಪ್ಪು ಪುನರಾವರ್ತನೆಯಾದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಅಕ್ರಮ ಮರಳು ಸಾಗಾಣಿಕೆ ತಡೆ ಮತ್ತು ಕೋವಿಡ್-19 ನಿಯಂತ್ರಣ ಕ್ರಮಗಳ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತು ಸ್ವಚ್ಛತೆ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ಈ ಕುರಿತು ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಿದ್ದು, ನಾಳೆಯಿಂದಲೇ ಜಿಲ್ಲೆಯಲ್ಲಿ ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯ ಮಾಡಿ. ಈ ಕುರಿತು ಇಂದು ಸಂಜೆಯಿAದಲೇ ಮೈಕ್‌ಗಳ ಮೂಲಕ ಜಿಲ್ಲೆಯಾದ್ಯಂತ ಪ್ರಚಾರ ಮಾಡಲು ಸಂಬAಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಿ. ಸಾರ್ವಜನಿಕವಾಗಿ ಓಡಾಡುವವರು ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ ರೂ. 200 ಗಳನ್ನು ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ರೂ. 100 ಗಳನ್ನು ದಂಡ ವಿಧಿಸಿ. ದಂಡ ಪಾವತಿಸದವರನ್ನು ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಿ. ತಪ್ಪಿದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ. ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಇಂತಹ ಕ್ರಮಗಳು ಕಡ್ಡಾಯವಾಗಿ ಜಾರಿಯಾಗಬೇಕು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಅಕ್ರಮ ಮರಳು, ಕಟ್ಟಡ ಕಲ್ಲು, ಗ್ರಾನೈಟ್ ಮತ್ತು ಮರ‍್ರಂ ಗಣಿಗಾರಿಕೆ ಮತ್ತು ಸಾಗಾಣಿಕೆ ನಿಯಂತ್ರಿಸಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ 153 ತಂಡಗಳನ್ನು ರಚಿಸಿ, ಸಮಿತಿಗೆ ತಾಲ್ಲೂಕು ಅಧ್ಯಕ್ಷರು ಹಾಗೂ ಸಮನ್ವಯ ಅಧಿಕಾರಿಗಳಾಗಿ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು(ತಾ.ಪಂ), ಸಹಾಯಕ ಕಾರ್ಯಪಾಲಕ ಅಭಿಯಂತರರು(ಲೋಕೋಪಯೋಗಿ ಇಲಾಖೆ), ಸಹಾಯಕ ನಿರ್ದೇಶಕರು(ಸಮಾಜ ಕಲ್ಯಾಣ ಇಲಾಖೆ) ರವರನ್ನು ನೇಮಿಸಲಾಗಿದೆ. ಅದರಂತೆ ಅನಧಿಕೃತ ಖನಿಜ ಸಾಗಾಣಿಕಾ ವಾಹನಗಳನ್ನು ಜಪ್ತು ಮಾಡಿ ಪೊಲೀಸ್ ಠಾಣೆ ಸುಪರ್ದಿಗೆ ನೀಡಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ದಂಡ ವಸೂಲು ಮಾಡಬೇಕು. ಸೆಪ್ಟೆಂಬರ್.16 ರೊಳಗೆ ಅಗತ್ಯ ಕ್ರಮಗಳನ್ನು ಕೈಗೊಂಡ ಬಗ್ಗೆ ವಿವರವಾದ ವರದಿ ಸಲ್ಲಿಸಬೇಕು ಎಂದು ಅವರು ಸಂಬAಧಿಸಿದ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಗಂಗಾವತಿ ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ, ಸಿಪಿಐ ರವಿ ಉಕ್ಕುಂದ, ಯುನಿಸೆಫ್‌ನ ಜಿಲ್ಲಾ ಸಂಯೋಜಕ ಹರೀಶ್ ಜೋಗಿ, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error