ಜಿ.ಪಂ. ಸಿಇಒ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ


ಕೊಪ್ಪಳ,: ಕೊಪ್ಪಳ ಜಿಲ್ಲೆಯ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ 2020-21ನೇ ಸಾಲಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಎಮ್.ಐ.ಎಸ್ ಅಂಕಿ ಅಂಶಗಳನ್ನು ಆಧರಿಸಿ ಅತ್ಯುತ್ತಮವಾಗಿ ಸಾಧನೆ ಮಾಡಿದ್ದಕ್ಕಾಗಿ ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಘುನಂದನ್ ಮೂರ್ತಿ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದ್ದು, ಏಪ್ರಿಲ್ 09 ರಂದು ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
 ಪ್ರಯುಕ್ತ ಜಿಲ್ಲಾ ಪಂಚಾಯಿತಿ, ತಾಲ್ಲೂಕು, ಗ್ರಾಮ ಪಂಚಾಯಿತಿಯ ಅಧಿಕಾರಿ, ಸಿಬ್ಬಂದಿ ಸಿಇಒ ಅವರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭ ಜಿ.ಪಂ. ಮುಖ್ಯ ಯೋಜನಾಧಿಕಾರಿಗಳು, ಯೋಜನಾ ಅಂದಾಜು ಮತ್ತು ಮೌಲ್ಯ ಮಾಪನಾಧಿಕಾರಿಗಳು ಹಾಗೂ ಯೋಜನಾ ವಿಭಾಗದ ಸಿಬ್ಬಂದಿ ಹಾಜರಿದ್ದರು

Please follow and like us:
error