ಜೂ. 27 ರಂದು ಕೆಂಪೇಗೌಡ ಜಯಂತಿ ಆಚರಣೆಗೆ ನಿರ್ಧಾರ : ಸಿದ್ಧಲಿಂಗೇಶ್ವರ ಕೆ.ಆರ್.

ಕೊಪ್ಪಳ ಜೂ. 19   ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜೂನ್. 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಆಚರಿಸಲಾಗುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ ಕೆ. ರಂಗಣ್ಣವರ ಹೇಳಿದರು.
ನಾಡಪ್ರಭು ಕೆಂಪೇಗೌಡರು ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಪÇರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಂಪೇಗೌಡರ ಜಯಂತಿಯನ್ನು ಕಳೆದ ವರ್ಷದಂತೆ ಈ ವರ್ಷವೂ ಸಹ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದೆ.  ಕೆಂಪೇಗೌಡರ ಜಯಂತಿ ಆಚರಣೆ ಸಮಾರಂಭವನ್ನು ಜೂ. 27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ನಡೆಯಲಿದೆ.  ಕಾರ್ಯಕ್ರಮದ ಅಂಗವಾಗಿ ಕೆಂಪೇಗೌಡರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೊಪ್ಪಳದ ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟದೂರ ಅವರಿಂದ ವಿಶೇಷ ಉಪನ್ಯಾಸ ಜರುಗಲಿದೆ.  ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ ಕಡ್ಡಾಯವಾಗಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸುವಂತೆ ಹಾಗೂ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು.  ಕಾರ್ಯಕ್ರಮಕ್ಕೆ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಆಗಮಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ ಕೆ. ರಂಗಣ್ಣವರ ಮನವಿ ಮಾಡಿದರು.ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎ. ಬಸವರಾಜ, ಜಿಲ್ಲಾಧಿಕಾರಿ ಕಚೇರಿಯ ಮಹವೀರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

Please follow and like us:
error