ಡಿಕೆ ಶಿವಕುಮಾರ್‌ಗೆ ಅ.25ರ ತನಕ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಲ್ಲಿ, ಅ.15: ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿಚಾರಣೆಗಾಗಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವ ಕುಮಾರ್ ಇನ್ನೂ 10 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಬೇಕಾಗಿದೆ. ಮಂಗಳವಾರ ದಿಲ್ಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಅ.25ರ ತನಕ ವಿಸ್ತರಿಸಿ ಆದೇಶಿಸಿದರು. ಈ ಮೂಲಕ ಸತತ ಮೂರನೇ ಬಾರಿ ಡಿಕೆಶಿ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

Please follow and like us:
error