ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ : ಮಂಗಳವಾರಕ್ಕೆ ಮುಂದೂಡಿಕೆ

ಹೊಸದಿಲ್ಲಿ, : ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಈ.ಡಿ. ವಿಚಾರಣೆ ಎದುರಿಸುತ್ತಿರುವ ಕನಕಪುರ ಶಾಸಕ ಡಿಕೆ ಶಿವಕುಮಾರ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ದಿಲ್ಲಿ ಹೈಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ.

ಶಿವಕುಮಾರ್ ಪರ ವಕೀಲರಾದ ಅಭಿಷೇಕ್ ಸಿಂಘ್ವಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 3:30ಕ್ಕೆ ಮುಂದೂಡಲಾಗಿದೆ. ನಾಳೆ ಸಿಂಘ್ವಿ ಅವರು ಡಿಕೆಶಿ ಪರ ವಾದ ಮಂಡಿಸಲಿದ್ದಾರೆ. ಈ.ಡಿ. ನ್ಯಾಯಾಲಯಕ್ಕೆ ತನಿಖಾ ಪ್ರಗತಿ ವರದಿ ಸಲ್ಲಿಸಿದ್ದು, ಈ ವರದಿಯ ಆಧಾರದ ಮೇಲೆ ಸಿಂಘ್ವಿ ವಾದ ಮಂಡಿಸಲಿದ್ದಾರೆ. ಗುರುವಾರ ಹಾಗೂ ಶುಕ್ರವಾರ ಈ.ಡಿ. ಪರ ವಕೀಲರು ವಾದಿಸಲಿದ್ದಾರೆ.

Please follow and like us:
error