ಡೆಂಗ್ಯೂ, ಚಿಕೂನ್‌ಗುನ್ಯ ತಡೆಗೆ ವಿವಿಧ ಇಲಾಖೆ ಅಧಿಕಾರಿಗಳ ಶ್ರಮ ಅಗತ್ಯ : ರಘುನಂದನ್ ಮೂರ್ತಿ

ಕೊಪ್ಪಳ, : ಕೊಪ್ಪಳ ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಚಿಕೂನ್‌ಗುನ್ಯ ರೋಗಗಳು ಹರಡುವುದನ್ನು ತಡೆಗಟ್ಟಲು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯ ಚಿತ್ತದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಹೇಳಿದರು.
ಡೆಂಗ್ಯೂ ವಿರೋಧಿ ಮಾಸಾಚರಣೆ 2020ರ ಅಂಗವಾಗಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಕೊಠಡಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ “ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ” ಹಾಗೂ ಜಿಲ್ಲಾ ಮಲೇರಿಯಾ ನಿವಾರಣಾ ಕಾರ್ಯಪಾಲನಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಶುದ್ಧ ಕುಡಿಯುವ ನೀರನ್ನು ಪೂರೈಸಲು ಪೈಪುಗಳ ಸೋರಿಕೆಯನ್ನು ತಡೆಗಟ್ಟುವಂತೆ  ಸೂಚನೆ ನೀಡಿದರು. ನಗರ ಪ್ರದೇಶಗಳಲ್ಲಿ ಹೆಚ್ಚಾಗಿ  ಡೆಂಗ್ಯೂ, ಚಿಕೂನ್‌ಗುನ್ಯಾ ಪ್ರಕರಣಗಳು ವರದಿಯಾಗುವುದರಿಂದ ನಗರ ಪ್ರದೇಶಗಳಿಗೆ ವಿಶೇಷವಾಗಿ ಕಾರ್ಯ ಯೋಜನೆರೂಪಿಸಿ, ನಿಯಂತ್ರಿಸುವAತೆ ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತು ನಗರ ಸಭೆಗಳ ಕಮಿಷನ್‌ರಗಳಿಗೆ ಸೂಚಿಸಿದರು.
ತ್ಯಾಜ್ಯ ವಸ್ತುಗಳಾದ ಎಳೆನೀರು ಚಿಪ್ಪುಗಳು, ಅನುಪಯುಕ್ತ ಟೈರುಗಳು, ಪ್ಲಾಸ್ಟಿಕ್ ಕಪ್ ಇತ್ಯಾಧಿ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳವಂತೆ ಸೂಚನೆ ಸಾರ್ವಜನಿಕರು ತಮ್ಮ ಮನೆಯಲ್ಲಿನ ನೀರು ಶೇಖರಣಾ ಸಲಕರಣೆಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಭದ್ರವಾಗಿ ಮುಚ್ಚಬೇಕು. ಅವುಗಳನ್ನು ವಾರಕ್ಕೊಮ್ಮೆ ಖಾಲಿಮಾಡಿ ಒಣಗಿಸಬೇಕು. ಸೊಳ್ಳೆಗಳು ಕಚ್ಚದಂತೆ ಮಲಗುವಾಗ ಸೊಳ್ಳೆಪರದೆಗಳನ್ನು ಬಳಸಬೇಕು, ಬೇವಿನ ಹೊಗೆಯನ್ನು ಬೆಳಿಗ್ಗೆ ಮತ್ತು ಸಂಜೆ ಮನೆಯಲ್ಲಿ ಹಾಕಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು.ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗ್ಯೂ ಇನ್ನಿತರೇ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಡೆಂಗ್ಯೂ  ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಈಗಾಗಲೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ಧಿಷ್ಟ ಚಿಕಿತ್ಸೆ ಇಲ್ಲದಿದ್ದರೂ, ಜನರೂ ಭಯಪಡುವ ಅವಶ್ಯಕತೆ ಇಲ್ಲ, ಲಕ್ಷಣಗಳನ್ನಾಧರಿಸಿ ಚಿಕಿತ್ಸೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಮತ್ತು ಪ್ರಯೋಗಾಲಯ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು ಜನರು ಅನಗತ್ಯ ಭಯಕ್ಕೆ ಒಳಗಾಗದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ|| ವೆಂಕಟೇಶ್. ಕೆ ಮಾತನಾಡಿ, ಪ್ರಸ್ತುತ ಮುಂಗಾರು ಮಳೆ ಹೆಚ್ಚಾಗಿದ್ದು, ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ರೋಗಗಳು ವ್ಯಾಪಕವಾಗಿ ಹರಡುವ ಸಂಭವ ಹೆಚ್ಚಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಈ ಕುರಿತು ಎಚ್ಚರವಹಿಸಬೇಕು. ಡೆಂಗ್ಯೂ ಚಿಕುನ್‌ಗುನ್ಯಾಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಇಲ್ಲದ ಕಾರಣ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಮಾಡುವುದೇ ಇದಕ್ಕೆ ಮೂಲ ಪರಿಹಾರ ಎಂದರು.
ಜಿ.ಪA. ಸಿಇಒ ಮಾತನಾಡಿ, ರೋಗಗಳ ಹರಡುವಿಕೆ ಹಾಗೂ ನಿಯಂತ್ರಣ ಕೇವಲ ಆರೋಗ್ಯ ಇಲಾಖೆ ಜವಾಬ್ದಾರಿ ಮಾತ್ರವಲ್ಲ. ಎಲ್ಲಾ ಇಲಾಖೆಗಳು ಹಾಗೂ ಸಾರ್ವಜನಿಕರು ಸಹಕಾರದಿಂದ ಜಿಲ್ಲೆಯಲ್ಲಿ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದರು. ಮಳೆಯಿಂದಾಗಿ ತಗ್ಗು ಪ್ರದೇಶಗಳು ಗುಂಡಿಗಳು ಚರಂಡಿಗಳಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತವೆ. ಆದ್ದರಿಂದ ಗ್ರಾಮ ಪಂಚಾಯತಿ ಹಾಗೂ ನಗರ ಪ್ರದೇಶಗಳಲ್ಲಿ ಕಂಡುಬರುವ ಅಂತಹ ಪ್ರದೇಶಗಳನ್ನು ಗುರುತಿಸಿ ತಗ್ಗು ಗುಂಡಿಗಳನ್ನು ಮುಚ್ಚಿಸಲು ಹಾಗೂ ನೀರು ಸರಾಗವಾಗಿ ಹರಿದು ಹೋಗಲು ಚರಂಡಿಗಳ ಹೂಳನ್ನು ತೆಗೆಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣ ಸಲಹೆಗಾರ ರಮೇಶ್.ಕೆ, ಪ್ರಾತ್ಯಕ್ಷಿತೆ ಮೂಲಕ ಜಿಲ್ಲೆಯಲ್ಲಿ ರೋಗವಾಹಕ ಆಶ್ರಿತ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕೂನ್‌ಗುನ್ಯಾ ರೋಗಗಳ ಸ್ಥಿತಿಗತಿ, ವಿವಿಧ ರೀತಿಯಾ ಜ್ವರಗಳ ಲಕ್ಷಣ, ಹರಡುವ ವಿಧಾನ, ರೋಗಗಳು ಹರಡುವುದಕ್ಕೆ ಕಾರಣವಾಗುವ ರೋಗವಾಗಕ ಸೊಳ್ಳೆಗಳ ಬಗ್ಗೆ, ಸೊಳ್ಳೆ ಉತ್ಪತ್ತಿ ತಾಣಗಳು & ಅವುಗಳ ನಿವಾರಣೆ, ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಜನಸಮುದಾಯ ಅನುಸರಿಸಬೇಕಾದ ನಿವಾರಣೋಪಾಯಗಳ ಬಗ್ಗೆ ವಿವರವಾಗಿ ಸಭೆಗೆ ವಿವರಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಧಿಕಾರಿಗಳಾದ ಡಾ. ವೆಂಕಟೇಶ್.ಕೆ  ಮಾತನಾಡಿ ಜನವರಿ 2020 ರಿಂದ ಇಲ್ಲಿಯವರೆಗೆ 140 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಹೆಚ್ಚಿನ ಪ್ರಕರಣಗಳು ನಗರ ಪ್ರದೇಶಗಳಿಂದ ವರದಿಯಾಗಿರುವುದನ್ನು ಖಚಿತಪಡಿಸಿ ನಿಯಂತ್ರಣ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕ್ರಮ ಅನುಸ್ಟಾನಾಧಿಕಾರಿಗಳು, ತಾಲೂಕ ಆರೋಗ್ಯಾಧಿಕಾರಿಗಳು, ಪುರಸಭೆ, ನಗರಸಭೆ ಮತ್ತು ಪಟ್ಟಣ ಪಂಚಾಯತ್ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ಆರೋಗ್ಯ ಮೇಲ್ವಿಚಾರಕರು ಉಪಸ್ಥಿತರಿದ್ದರು.

Please follow and like us:
error