ತಾಕತ್ ಇದ್ರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ- ಸಿದ್ದರಾಮಯ್ಯ

ಬೆಂಗಳೂರು : ರೈತ ವಿರೋಧಿ  ಮುಖ್ಯಮಂತ್ರಿ ಯಡಿಯೂರಪ್ಪ  ಅವರೇ, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ ಕೊರೊನಾ ಸಂಕಟದಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ರೈತರು ಬೀದಿಗೆ ಬರಲಾರರು ಎಂಬ ದುಷ್ಟ ಆಲೋಚನೆಯಿಂದ ಈ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿದ್ದೀರಲ್ಲಾ? ಕಣ್ಣು ಬಿಟ್ಟು ರಾಜ್ಯದ ಬೀದಿಗಳನ್ನು ನೋಡಿ, ರೈತರು ಪ್ರಾಣವನ್ನು ಲೆಕ್ಕಿಸದೆ ಬೀದಿಗೆ ಬಂದಿದ್ದಾರೆ.ಮುಖ್ಯಮಂತ್ರಿ ಮುಖ್ಯಮಂತ್ರಿ ಯಡಿಯೂರಪ್ಪ  ಅವರೇ, ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಹಾವೇರಿಯಲ್ಲಿ ರೈತರನ್ನು ಗುಂಡಿಟ್ಟು ಸಾಯಿಸಿದಿರಿ, ಈ ಬಾರಿ ಮುಖ್ಯಮಂತ್ರಿಯಾದಾಗ ಇಡೀ ರೈತ ಸಮುದಾಯವನ್ನೇ ಸಾಯಿಸಲು ಹೊರಟಿದ್ದೀರಿ? ನೊಂದ ರೈತರ ಕಣ್ಣೀರ ಶಾಪ ನಿಮಗೆ ತಟ್ಟದೆ ಇರದು.ಕಾವೇರಿ-ಕೃಷ್ಣ ನದಿನೀರು ಹಂಚಿಕೆಯಲ್ಲಿ ದ್ರೋಹ ಎಸಗಿದ್ದೀರಿ, ಮಹದಾಯಿ-ಮೇಕೆದಾಟು ಯೋಜನೆಗಳಲ್ಲಿ ಮೋಸ ಮಾಡಿದಿರಿ. ಬೀಜ-ರಸಗೊಬ್ಬರ ಪೂರೈಕೆ ಮಾಡದೆ ರೈತರನ್ನು ಗೋಳುಹೊಯ್ಕೊಂಡಿರಿ. ಮುಖ್ಯಮಂತ್ರಿ ಯಡಿಯೂರಪ್ಪ  ಅವರೇ, ನಿಮ್ಮ ಬಿಜೆಪಿಗೆ ಯಾಕೆ ರೈತರ ಮೇಲೆ ಇಷ್ಟೊಂದು ದ್ವೇಷ? ಕರ್ನಾಟಕದ ಬಗ್ಗೆ ಯಾಕೆ ಸೇಡಿನ ಭಾವನೆ? ಮುಖ್ಯಮಂತ್ರಿ ಮುಖ್ಯಮಂತ್ರಿ ಯಡಿಯೂರಪ್ಪ  ಅವರೇ, ನೀವು ರೈತ ಸಮುದಾಯದ ಎದುರು ಬೆತ್ತಲಾಗಿದ್ದೀರಿ, ನೀವು ಹೊದ್ದುಕೊಂಡಿರುವ ಯಾವ ಹಸಿರು ಶಾಲು ಕೂಡಾ ನಿಮ್ಮ ಮಾನ ಮುಚ್ಚಲಾರದು.. ನೀವು ನಿಜವಾಗಿಯೂ ರೈತರ ಪರವಾಗಿದ್ದರೆ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರ ಜೊತೆ ನಿಂತುಕೊಳ್ಳಿ.  ಮುಖ್ಯಮಂತ್ರಿ ಮುಖ್ಯಮಂತ್ರಿ ಯಡಿಯೂರಪ್ಪ  ಅವರೇ,ದೇಶವನ್ನೇ ಕಾರ್ಪೋರೇಟ್ ಕುಳಗಳಿಗೆ ಮತ್ತು ರಿಯಲ್ ಎಸ್ಟೇಟ್ ಧಣಿಗಳಿಗೆ ಮಾರಾಟ ಮಾಡಲು ಹೊರಟಿರುವ ಮೋದಿಯವರ ತಾಳಕ್ಕೆ ನೀವು ಕುಣಿಯತೊಡಗಿದರೆ ವರ್ತಮಾನ ಮಾತ್ರವಲ್ಲ, ಇತಿಹಾಸವೂ ನಿಮ್ಮನ್ನು ಕ್ಷಮಿಸಲಾರದು. ಈಗಲೂ ಕಾಲ ಮಿಂಚಿಲ್ಲ, ಆತ್ಮಸಾಕ್ಷಿಗೆ ಕರೆಗೊಟ್ಟು ರೈತರ ಬೇಡಿಕೆ ಒಪ್ಪಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

Please follow and like us:
error