ದನ/ಎಮ್ಮೆಗಳ ಜಾನುವಾರು ಸಂತೆ, ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ

ಚರ್ಮ ಗಂಟು ರೋಗ ನಿಯಂತ್ರಣ

ಕೊಪ್ಪಳ, : ಕೊಪ್ಪಳ ಜಿಲ್ಲೆಯಲ್ಲಿ ದನ/ಎಮ್ಮೆಗಳ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ (ಲಂಪಿಸ್ಕಿನ್ ಡಿಸೀಸ್) ವ್ಯಾಪಕವಾಗಿ ಹರಡುತ್ತಿರುವ ಕಾರಣ, ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144ರ ಮೇರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಯನ್ನು ಅಕ್ಟೋಬರ್.17 ರಿಂದ ಮುಂದಿನ ಆದೇಶದವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯ 268 ಗ್ರಾಮಗಳಲ್ಲಿ ದನ/ ಎಮ್ಮೆಗಳಲ್ಲಿ ಜಾನುವಾರು ಚರ್ಮ ಗಂಟು ರೋಗ (ಲಂಪಿಸ್ಕಿನ್ ಡಿಸೀಸ್) ಕಾಣಿಸಿಕೊಂಡಿದ್ದು, ಈವರೆಗೆ ಒಟ್ಟು 3611 ದನ/ಎಮ್ಮೆಗಳಲ್ಲಿ ರೋಗವು ಕಂಡುಬAದಿರುತ್ತದೆ. ಈ ರೋಗಕ್ಕೆ ಕೊಪ್ಪಳ ಜಿಲ್ಲೆಯ ಪಶುವೈದ್ಯಕೀಯ ಸೇವಾ ಇಲಾಖೆಯು ರೋಗ ಪೀಡಿತ ದನ/ಎಮ್ಮೆಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈ ರೋಗದಿಂದ ಯಾವುದೇ ಜಾನುವಾರುಗಳು ಮೃತಪಟ್ಟಿರುವುದು ಕಂಡುಬAದಿರುವುದಿಲ್ಲ. ಆದ್ದರಿಂದ ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಈ ಆದೇಶ ಹೊರಡಿಸಲಾಗಿದ್ದು, ಆದೇಶವು ದನ/ಎಮ್ಮೆಗಳ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಗೆ ಮಾತ್ರ ಅನ್ವಯವಾಗುತ್ತಿದ್ದು, ಇದನ್ನು ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕೆ ಅನ್ವಯವಾಗುವುದಿಲ್ಲ. ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:
error