ದೇವರೇ ಕಾಪಾಡಬೇಕು ಹೇಳಿಕೆ ಸಮರ್ಥಿಸಿಕೊಂಡ ಸಚಿವ ಬಿ.ಶ್ರೀರಾಮುಲು

 

‘ದೇವರು ದೊಡ್ಡವನು, ನಮ್ಮೆಲ್ಲ ಪ್ರಯತ್ನಗಳಿಗೆ ಅವನ ಕೃಪೆಯೂ ಇರಬೇಕು’ ಎಂಬ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ದೇವರೇ ಕಾಪಾಡಬೇಕು ಎನ್ನುವ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಅವರು  ಮಾನ್ಯ @CMofKarnataka ಶ್ರೀ @BSYBJP ಅವರ ನೇತೃತ್ವದ ನಮ್ಮ ಸರ್ಕಾರ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ಮತ್ತು ಸೋಂಕಿತರ ಚಿಕಿತ್ಸೆಗೆ ಎಲ್ಲ ಅತ್ಯಗತ್ಯ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿಗಳ ಜತೆ ನಾವೆಲ್ಲರೂ ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ, ಬೆಳಗ್ಗೆ ನಾನು ಮಾತನಾಡುವಾಗ ‘ದೇವರ ಕೃಪೆಯೂ ನಮ್ಮೆಲ್ಲರ ಮೇಲಿರಬೇಕು’ ಎಂಬ ಮಾತನ್ನು ಸಾಮಾನ್ಯ ಅರ್ಥದಲ್ಲಿ ಹೇಳಿದ್ದೇನೆಯೇ ಹೊರತು, ಹತಾಶೆಯಿಂದಲ್ಲ. ಇಡೀ ಸರ್ಕಾರ ಸಮಸ್ತ ಜನರ ಪರವಾಗಿ ಕೆಲಸ ಮಾಡುತ್ತಿದೆ. ಯಾರಿಗೂ ಆತಂಕ ಬೇಡ. ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸೋಂಕು ನಿಯಂತ್ರಿಸುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಕೋರುತ್ತೇನೆ ಎಂದು ಹೇಳಿದ್ಧಾರೆ.

 

Please follow and like us:
error