ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ದಿನಾಂಕ ಮುಂದೂಡಿಕೆ

ಕೊಪ್ಪಳ, : ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ಏಪ್ರಿಲ್ 28 ರಿಂದ ಮೇ 18 ರವರೆಗೆ ನಡೆಸಲು ತೀರ್ಮಾನಿಸಿತ್ತು. ಪ್ರಸ್ತುತ ಕೋವಿಡ್-19 ರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡುವAತೆ ಪೋಷಕರು, ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳಿAದ ಮನವಿಗಳು ಸ್ವೀಕೃತವಾದ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಲು ತೀರ್ಮಾನಿಸಲಾಗಿದೆ.
ಮುಂದುವರೆದು, 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಇಲಾಖೆಯ ನಿರ್ದೇಶನದಂತೆ ಆಯಾ ಕಾಲೇಜುಗಳಲ್ಲೇ ತಾತ್ವಿಕ ಪರೀಕ್ಷೆಗಳು ಮುಕ್ತಾಯಗೊಂಡ ಕೂಡಲೇ ಎರಡು ದಿನಗಳ ನಂತರ ಪ್ರಾರಂಭಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

Please follow and like us:
error