ದ್ವಿತೀಯ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗಮನಕ್ಕೆವಿದ್ಯಾರ್ಥಿಗಳಿಗೆ ಮಾರ್ಚ್ 4 ರಿಂದ ಏಪ್ರಿಲ್ 9 ರವರೆಗೆ ಉಚಿತ ಬಸ್ ಪ್ರಯಾಣ


ಕೊಪ್ಪಳ  : ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಯನ್ನು ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮಾರ್ಚ್ 04 ರಿಂದ 23 ರವರೆಗೆ ದ್ವಿತೀಯ ಪಿ.ಯು.ಸಿ ಅಂತಿಮ ಪರೀಕ್ಷೆ ಹಾಗೂ ಮಾರ್ಚ್ 27 ರಿಂದ ಏಪ್ರಿಲ್ 09 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಯನ್ನು ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಹೋಗಿ ಬರಲು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಈ ಸೇವೆಯನ್ನು ಸದುಪಯೋಗಪಡೆದುಕೊಳ್ಳಬೇಕು. ಈ ಕುರಿತಂತೆ ಏನಾದರೂ ಅನನುಕೂಲತೆಯಾದಲ್ಲಿ
ಕೊಪ್ಪಳ ವಿಭಾಗ ಸಂಚಾರ ಅಧಿಕಾರಿ ಮೊ.ಸಂ.7760992402 ಗೆ ಸಂಪರ್ಕಿಸಬೇಕು ಎಂದು ಈ.ಕ.ರ.ಸಾ. ಸಂಸ್ಥೆಯ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ  ತಿಳಿಸಿದ್ದಾರೆ.

Please follow and like us:
error