ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ‌ ಎಂಬುದು ಪುರಾವೆಸಹಿತ ಸಾಬೀತಾಗಿದೆ-ಸಿದ್ದರಾಮಯ್ಯ

ಕೊಪ್ಪಳ : ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ‌ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ಧಾರೆ.

ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಬಂಧಿಸಬೇಕಿತ್ತಲ್ಲವೇ? ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರೂ ರೈತ ವಿರೋಧಿ‌ ಕಾನೂನುಗಳನ್ನು ವಾಪಸು‌ ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ @narendramodi ಅವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ. ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ. ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲವೇ? ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ. ಪ್ರಧಾನಿ  @narendramodi ಅವರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಅಂತ ಅದಾನಿ, ಅಂಬಾನಿಗೆ ಮಾತು ಕೊಟ್ಟಿದ್ದಾರೆ, ಹೀಗಾಗಿ ರೈತರು ಎಷ್ಟೇ ಪ್ರತಿಭಟನೆ ನಡೆಸಿದರೂ ಅವುಗಳನ್ನು ವಾಪಾಸು ಪಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Please follow and like us:
error