ನಂಜನಗೂಡು ಪ್ರಕರಣ ಶೀಘ್ರ ಸೂಕ್ತ ಕ್ರಮ -ಬಿ.ಶ್ರೀರಾಮುಲು

ಬೆಂಗಳೂರು : ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು, ಮುಖ್ಯಮಂತ್ರಿ @BSYBJP ಬಿ.ಎಸ್.ಯಡಿಯೂರಪ್ಪನರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂಬ ನನ್ನ ಭರವಸೆಗೆ ಬೆಲೆ ಕೊಟ್ಟು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಇಲಾಖೆಯ ವೈದ್ಯಾಧಿಕಾರಿಗಳ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ವ್ಯಾಪಿಸಿರುವ ಸನ್ನಿವೇಶದಲ್ಲಿ ಜನರ ಆರೈಕೆಗೆ ನಿಮ್ಮೆಲ್ಲರ ಸೇವೆ ಅತ್ಯಗತ್ಯ. ಈ ಜವಾಬ್ದಾರಿ ಅರಿತು, ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರ ನಡೆಸುವ ನಿರ್ಧಾರ ಹಿಂಪಡೆದಿರುವ ಎಲ್ಲ ಆರೋಗ್ಯಾಧಿಕಾರಿಗಳಿಗೆ ಧನ್ಯವಾದಗಳು ಎಂದು ಹೇಳಿದ್ಧಾರೆ..

Please follow and like us:
error