ನಗರದ ಮಂದಿ ಹಳ್ಳಿಗಳಿಗೆ ಹೋಗಬೇಡಿ- ಎಸ್ಸೆಸ್ಸೆಲ್ಸಿ ಪರೀಕ್ಷೆ,ಸ್ಥಳೀಯ ಸಂಸ್ಥೆ ಚುನಾವಣೆ ಮುಂದಕ್ಕೆ: ಸಿಎಂ

 ಕೊರೊನಾ ತಡೆಯುವ ನಿಟ್ಟಿನಲ್ಲಿ ರಾಜ್ಯದ ಜನತೆ ಜನತಾ ಕರ್ಫ್ಯೂಗೆ ಬೆಂಬಲ ನೀಡಿದ್ದಾರೆ. ಕೊರೊನಾ ತಡೆಯುವ ನಿಟ್ಟಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1700 ಹಾಸಿಗೆಯ ವಿಶೇಷ ಸಮುಚ್ಚಯವನ್ನು ಮೀಸಲಿಡಲಾಗಿದೆ. SSLC ಪರೀಕ್ಷೆ ಮುಂದೂಡಲಾಗಿದೆ  

ರಾಜ್ಯದ ಗಡಿಭಾಗವನ್ನು ಸಂಪೂರ್ಣ ಮುಚ್ಚಲಾಗಿದೆ. ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಮಾಡಲಾಗಿದೆ. ಬಾಲಬ್ರೂಯಿ ಅತಿಥಿ ಗೃಹದಲ್ಲಿ ಕೊರೊನಾ ತಡೆಯ ವಾರ್ ರೂಂ ತೆರೆಯಲಾಗಿದೆ. ಜನತೆ ಗಾಬರಿಯಾಗುವ ಅಗತ್ಯವಿಲ್ಲ. ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಎರಡು ತಿಂಗಳ ಪಡಿತರ ವಿತರಿಸಲಾಗುವುದು. ನಗರದ ಜನತೆ ಹಳ್ಳಿಗಳಿಗೆ‌ ಹೋಗಬಾರದು,’ವಿಕ್ಟೊರಿಯಾ ಆಸ್ಪತ್ರೆಯಲ್ಲಿನ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು,  ‌ ಇದೇ 27ರಿಂದ ಆರಂಭವಾಗಬೇಕಿದ್ದ SSLC ಪರೀಕ್ಷೆ ಮುಂದೂಡಲಾಗಿದೆ. ಇದರ ಜತೆಗೆ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ. ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲ ಚುನಾವಣೆಗಳನ್ನು ಮುಂದೂಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಮನವಿ ಮಾಡಿದರು.

Please follow and like us:
error