ನಾನು ಚೌಕಿದಾರ್ ಅಂತ ಹೇಳಿ ಕುಣಿದಾಡ್ತಿದ್ದವರೆಲ್ಲ ಈಗ ಎಲ್ಲಿದ್ದಾರೆ- ಸಿದ್ದರಾಮಯ್ಯ

ದೇಶದಲ್ಲಿ ಮಹಿಳೆಯರಿಗೆ, ಮಕ್ಕಳಿಗೆ, ದಲಿತರಿಗೆ ರಕ್ಷಣೆ ಇಲ್ಲ. ನಿತ್ಯ ಸಾವಿರಾರು ಕೊಲೆ, ಅತ್ಯಾಚಾರ, ಶೋಷಣೆಯ ಪ್ರಕರಣಗಳು ದಾಖಲಾಗ್ತಿವೆ. ಇವರಲ್ಲಿ ಎಷ್ಟು ಜನರಿಗೆ ನ್ಯಾಯ ಸಿಕ್ಕಿದೆ? ನಾನು ಚೌಕಿದಾರ್ ಅಂತ ಹೇಳಿ ಕುಣಿದಾಡ್ತಿದ್ದವರೆಲ್ಲ ಈಗ ಎಲ್ಲಿದ್ದಾರೆ? ಇದೇನಾ @narendramodi ಅವರ ಚೌಕಿದಾರಿಕೆ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರುಉತ್ತರ ಪ್ರದೇಶದಲ್ಲಿ ಹೆಣ್ಣೊಬ್ಬಳನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ. ಆಕೆಯ ಕುಟುಂಬದವರಿಗೂ ಶವವನ್ನು ನೋಡಲು ಅವಕಾಶ ನೀಡದೆ ಮಧ್ಯರಾತ್ರಿ ಪೊಲೀಸರೇ ಶವಸಂಸ್ಕಾರ ಮಾಡಿದ್ದಾರೆ. ಸರ್ಕಾರ ಅತ್ಯಾಚಾರಿಗೆ ಶಿಕ್ಷೆ ಕೊಡಿಸುವುದು ಬಿಟ್ಟು, ನೆರವಿಗೆ ನಿಂತಿದೆ ಅಂದ್ರೆ ಯೋಗಿ ಆದಿತ್ಯನಾಥ್‌ರಂಥವರು ಕಾವಿ ಬಟ್ಟೆಗೆ ಕಳಂಕವಲ್ಲದೆ ಇನ್ನೇನು? ಯೋಗಿ ಆದಿತ್ಯನಾಥ್ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಸೇರಿದಂತೆ 27 ಪ್ರಕರಣಗಳು ಇದ್ದವು. ಮುಖ್ಯಮಂತ್ರಿಯಾದ ಮೇಲೆ ಆ ಎಲ್ಲಾ ಪ್ರಕರಣಗಳನ್ನು ವಾಪಾಸು ಪಡೆಯುವಂತೆ ಮಾಡಿ, ಸಾತ್ವಿಕನಂತೆ ನಾಟಕ ಮಾಡುತ್ತಿದ್ದರೆ. ಇಂಥವರ ರಾಜ್ಯದಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಸಿಗಲು ಹೇಗೆ ಸಾಧ್ಯ? ಐಟಿ, ಇಡಿ, ಸಿಬಿಐ ಇಲಾಖೆಗಳು ತಮ್ಮ ಕರ್ತವ್ಯ ತಾವು ಮಾಡುವ ಬಗ್ಗೆ ನಮ್ಮ ತಕರಾರಿಲ್ಲ, ಆದರೆ ಚುನಾವಣೆಗಳು ಹತ್ತಿರ ಬಂದಾಗ ವಿರೋಧಿಗಳನ್ನು ಹತ್ತಿಕ್ಕಲು ಐಟಿ, ಇಡಿ, ಸಿಬಿಐ ಗಳನ್ನು ದುರ್ಬಳಕೆ ಮಾಡಿಕೊಂಡು ದಾಳಿ ಮಾಡಿಸುವುದಕ್ಕಷ್ಟೇ ನಮ್ಮ ವಿರೋಧ. ಇಂತಹ ದಾಳಿ ಮೂಲಕ ನಮ್ಮ ಬಾಯಿ ಮುಚ್ಚಿಸಬಹುದು ಎಂದುಕೊಂಡಿದ್ದರೆ ಅದು ಬಿಜೆಪಿಯವರ ಭ್ರಮೆ ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ

 

Please follow and like us:
error