ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್ ಇಲ್ಲ -ಸಿಎಂ ಯಡಿಯೂರಪ್ಪ

ಬೆಂಗಳೂರು : ಯಾವುದೇ ರೀತಿಯ ಮಾಹಿತಿ ಬೇಕಿದ್ದರೂ ಪ್ರತಿಪಕ್ಷದವರು, ಮಾದ್ಯಮದವರು ಸಂಪರ್ಕಿಸಿದರೆ ನೀಡುತ್ತೆವೆ ಎಂದು ಹೇಳಿದ ಸಿಎಂ ಬೆಂಗಳೂರಿನ ಲಾಕ್‌ಡೌನ್‌ ಮುಂದುವರೆಯುತ್ತದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದ ಅವರು, ಬೆಂಗಳೂರು ಮಾತ್ರ ಕರ್ನಾಟಕದ ಯಾವುದೇ ಜಿಲ್ಲೆಗಳಲ್ಲಿ ಇನ್ನು ಮುಂದೆ ಲಾಕ್‌ಡೌನ್ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಜನರು ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಾಗಿದೆ. ಆರ್ಥಿಕತೆ ಸರಾಗವಾಗಬೇಕಾಗಿದೆ. ಹಾಗಾಗಿ ಜನರು ಸಾಮಾಜಿಕ, ದೈಹಿಕ ಅಂತರ ಕಾಪಾಡಿಕೊಳ್ಳಿ, ಮಾಸ್ಕ್ ಧರಿಸಿ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.ಮಕ್ಕಳು ಮತ್ತು ವಯಸ್ಸಾದವರು ಮನೆಯಿಂದ ಹೊರಗೆ ಬರದೆ ಸಹಕರಿಸಬೇಕು, ಪ್ರತಿಪಕ್ಷಗಳು, ಮಾಧ್ಯಮಗಳು ಸಹಕರಿಸಬೇಕು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಇನ್ನು ಮುಂದೆ ಲಾಕ್‌ಡೌನ್ ಮಾಡುವುದಿಲ್ಲ. ಕೊರೊನಾ ಪ್ರಕರಣಗಳು ಕಂಡಬಂದ ರಸ್ತೆಯಲ್ಲಿ ನೂರು ಮೀಟರ್ ಅಂತರದ ಸೀಲ್‌ಡೌನ್‌ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

 

Please follow and like us:
error