ನಿಜಶರಣ ಅಂಬಿಗರ ಚೌಡಯ್ಯ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ


ಕೊಪ್ಪಳ : ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಇಂದು (ಜ.21) ಪುಷ್ಪ ನಮನ ಸಲ್ಲಿಸಲಾಯಿತು.


ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ಸಹಕಾರ ಇಲಾಖೆಯ ಉಪನಿರ್ದೇಶಕ ಬಸವರಾಜ್ ಪಾಟೀಲ್ ಕೊಂಕಲ್, ಸಮಾಜದ ಮುಖಂಡರಾದ ಯಮನಪ್ಪ ಕಬ್ಬೇರ್, ವೆಂಕಪ್ಪ ಬಾರಕೇರ್, ಗಂಗಾಧರ ಕಬ್ಬೇರ್, ಸೋಮಣ್ಣ ಬಾರಕೇರ್, ವಿರುಪಾಕ್ಷಪ್ಪ ಬಾರಕೇರ್, ಶಂಕರಗೌಡ ಮಾಲಿಪಾಟೀಲ್, ರಮೇಶ ಕಬ್ಬೇರ್, ಹುಲಗಪ್ಪ ಕಬ್ಬೇರ್ ಹಾಗೂ ಹಲವರು ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error